ಬೆಂಗಳೂರು (www.vknews.in): ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಭೇಟಿ ಮಾಡಿ, ಪುಸ್ತಕ ಮತ್ತು ಗಣಪತಿ ಮೂರ್ತಿಯನ್ನು ನೀಡಿ ಅಭಿನಂದಿಸಿತು.
ಇದೇ ಸಂದರ್ಭದಲ್ಲಿ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಮತ್ತು ಮಾಧ್ಯಮ ಸಂಜೀವಿನಿ ಯೋಜನೆಯನ್ನು ತ್ವರಿತ ಗತಿಯಲ್ಲಿ ಜಾರಿಗೊಳಿಸಬೇಕು ಎಂದು ಕೆಯುಡಬ್ಲೂಜೆ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು. ಈ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಭರವಸೆ ನೀಡಿದರು. ಜುಲೈ 1 ರಂದು ಪತ್ರಿಕಾ ದಿನಾಚರಣೆಯನ್ನು ವಾರ್ತಾ ಇಲಾಖೆ, ಮಾಧ್ಯಮ ಅಕಾಡೆಮಿ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸಂಯುಕ್ತಾಶ್ರಯದಲ್ಲಿ ಪ್ರತಿ ವರ್ಷ ಆಚರಣೆ ಮಾಡಿಕೊಂಡು ಬರಲಾಗುತ್ತಿದೆ.
ಪ್ರತಿ ವರ್ಷವೂ ಮುಖ್ಯಮಂತ್ರಿಗಳು ಪತ್ರಿಕಾ ದಿನಾಚರಣೆ ಉದ್ಘಾಟನೆ ಮಾಡಿಕೊಂಡು ಬಂದಿದ್ದಾರೆ. ಈ ಬಾರಿ ತಾವು ಉದ್ಘಾಟನೆಗೆ ಆಗಮಿಸಬೇಕು ಎಂದು ಕೆಯುಡಬ್ಲೂೃಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂಧಿಸಿದ ಸಿಎಂ ಡಿ.ಕೆ.ಶಿವಕುಮಾರ್ ಅವರು, ಬ್ಯೂಸಿ ಇದ್ದೇನೆ. ಆದರೂ, ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಯತ್ನಿಸುವೆ ಎಂದು ಭರವಸೆ ನೀಡಿದರು.
ನಿಯೋಗದಲ್ಲಿ ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ದೇವಪ್ಪ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಚಾಮರಾಜನಗರದ ಮಹೇಂದ್ರ, ಪತ್ರಕರ್ತರು ಜೊತೆಯಲ್ಲಿದ್ದರು
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.