ಶ್ರೀನಿವಾಸಪುರ(www.vknews.in): ಪಟ್ಟಣದ ವಾಸವಿ ಕನ್ಯಕಾಪರಮೇಶ್ವರಿ ದೇವಾಲಯ ದ 35ನೇ ವಾರ್ಷಿಕೋತ್ಸವವನ್ನು ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ದೇವಿ ವಿಗ್ರಹಕ್ಕೆ ವಿಶೇಷ ಬಂಗಾರದ ಸೀರೆ ಅಲಂಕಾರ ಮಾಡಲಾಗಿದ್ದು, ಉತ್ಸವ ಮೂರ್ತಿಗೆ ಕುಲಬಾಂಧವರಿಂದ ಅಕ್ಕಿ ಅಭಿಷೇಕ ನೆರವೇರಿಸಲಾಯಿತು. ಬೆಳಿಗ್ಗೆಯಿಂದಲೇ ಭಕ್ತರು ದೇವಾಲಯಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆಗಳಲ್ಲಿ ಭಾಗವಹಿಸಿದರು. ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತರ ಮನಸೆಳೆದವು. ದೇವಿಯ ವೈಭವಯುತ ಅಲಂಕಾರ ದೇವಾಲಯದ ಪ್ರಮುಖ ಆಕರ್ಷಣೆಯಾಗಿತ್ತು.
ದೇವಾಲಯದ ಪ್ರಧಾನ ಅರ್ಚಕರಾದ ಸುಬ್ರಮಣಿಸ್ವಾಮಿ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ವಿಶೇಷ ಮಹಾಮಂಗಳಾರತಿ ನಡೆಸಿಕೊಟ್ಟರು. ಅಕ್ಕಿ ಅಭಿಷೇಕದ ವೇಳೆ ಭಕ್ತರು ಭಕ್ತಿಭಾವದಿಂದ ಪೂಜೆಯಲ್ಲಿ ತೊಡಗಿಸಿಕೊಂಡಿದ್ದರು. ಕಾರ್ಯಕ್ರಮದ ಅಂಗವಾಗಿ ಭಜನೆ, ಮಂಗಳಾರತಿ ಹಾಗೂ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು. ದೇವಾಲಯದ ಆವರಣದಲ್ಲಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವಿಯ ಆಶೀರ್ವಾದ ಪಡೆದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.