ನವದೆಹಲಿ (www.vknews.in) : ಇರಾನ್ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಆಹ್ವಾನವನ್ನು ಇರಾನ್ ಅಧ್ಯಕ್ಷರು ನೀಡಿರುವುದಾಗಿ ವರದಿಯಾಗಿದೆ.
ಜುಲೈ 5ರಿಂದ 9ರವರೆಗೆ ಟೆಹ್ರಾನ್, ಕೊಮ್ ಮತ್ತು ಮಶ್ಹಾದ್ ನಗರಗಳಲ್ಲಿ ಅಂತ್ಯಕ್ರಿಯೆ ಹಾಗೂ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಆದರೆ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ಭಾರತ ಸರ್ಕಾರ ಇನ್ನೂ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ.
ಮೂರು ದಶಕಗಳಿಗಿಂತ ಹೆಚ್ಚು ಕಾಲ ಇರಾನ್ನ ಸರ್ವೋಚ್ಚ ನಾಯಕರಾಗಿದ್ದ ಖಮೇನಿ ಅವರು ಫೆಬ್ರವರಿ 28ರಂದು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಅವರ ಅಂತಿಮ ಸಂಸ್ಕಾರ ಜುಲೈ 9ರಂದು ಮಶ್ಹಾದ್ ನಗರದಲ್ಲಿ ನಡೆಯಲಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.