ಮಂಗಳೂರು (www.vknews.in) : ಬಾಲಿವುಡ್ನ ಬಾದ್ಶಾ ಶಾರುಖ್ ಖಾನ್ ಇಂದು ಮಂಗಳೂರಿಗೆ ಆಗಮಿಸಲಿದ್ದು, ಅಭಿಮಾನಿಗಳಲ್ಲಿ ಭಾರೀ ಸಂಭ್ರಮ ಮೂಡಿದೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘An Evening With Shah Rukh Khan’ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆಗಳು ನಡೆದಿವೆ.
ಮಂಗಳೂರಿನೊಂದಿಗೆ ಶಾರುಖ್ ಖಾನ್ ಅವರಿಗೆ ವಿಶೇಷ ಭಾವನಾತ್ಮಕ ನಂಟಿದೆ. ಅವರ ಅಜ್ಜರು 1960ರ ದಶಕದಲ್ಲಿ ಮಂಗಳೂರು ಬಂದರಿನಲ್ಲಿ ಮುಖ್ಯ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ವೇಳೆ, ಶಾರುಖ್ ತಮ್ಮ ಬಾಲ್ಯದ ಸುಮಾರು ಐದು ವರ್ಷಗಳನ್ನು ಅಜ್ಜಿಯ ಆರೈಕೆಯಲ್ಲಿ ಮಂಗಳೂರಿನಲ್ಲಿ ಕಳೆದಿದ್ದರು ಎನ್ನಲಾಗಿದೆ.
ಹಲವು ವೇದಿಕೆಗಳಲ್ಲಿ “ನಾನು ಮಂಗಳೂರಿನ ಮಗ” ಎಂದು ಹೆಮ್ಮೆಯಿಂದ ಹೇಳಿಕೊಂಡಿರುವ ಶಾರುಖ್, ಕರಾವಳಿ ಜನರೊಂದಿಗೆ ತಮ್ಮ ಬಾಂಧವ್ಯವನ್ನು ಸ್ಮರಿಸಿದ್ದಾರೆ. ಶಾರುಖ್ ಆಗಮನದ ಹಿನ್ನೆಲೆಯಲ್ಲಿ ಅಡ್ಯಾರ್ ಪ್ರದೇಶದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ನಿರೀಕ್ಷೆಯಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.