ಹೈದರಾಬಾದ್ (www.vknews.in) : ತೆಲಂಗಾಣದ ಸರ್ಕಾರಿ ವಸತಿ ಕಾಲೇಜಿನ ಹಾಸ್ಟೆಲ್ನಲ್ಲಿ 19 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೆರಿಗೆಯಾದ ಬಳಿಕ ನವಜಾತ ಶಿಶುವನ್ನು ಕಿಟಕಿಯಿಂದ ಹೊರಗೆ ಎಸೆದಿರುವ ಆರೋಪ ಕೇಳಿಬಂದಿದೆ.
ಗೋಲ್ಕೊಂಡದ ತೆಲಂಗಾಣ ಅಲ್ಪಸಂಖ್ಯಾತರ ವಸತಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿನಿ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಮಗುವನ್ನು ಬಕೆಟ್ನಲ್ಲಿ ಕೋಣೆಗೆ ತಂದು ಹಾಸ್ಟೆಲ್ ಕಿಟಕಿಯಿಂದ ಹೊರಗೆ ಎಸೆದಿರುವುದಾಗಿ ವಿಚಾರಣೆ ವೇಳೆ ಆಕೆ ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.
ಕಾಲೇಜಿನ ಪ್ರಾಂಶುಪಾಲರು ಔಷಧಾಲಯದ ಮೇಲ್ಛಾವಣಿಯಲ್ಲಿ ನವಜಾತ ಶಿಶುವಿನ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸಿಸಿಟಿವಿ ಪರಿಶೀಲನೆಯ ಬಳಿಕ ಪೊಲೀಸರು ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದರು.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ತಲೆಗೆ ತೀವ್ರ ಗಾಯವಾಗಿರುವುದೇ ಶಿಶುವಿನ ಸಾವಿಗೆ ಕಾರಣವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿಯ ಆರೋಗ್ಯ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಆಕೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗರ್ಭಧಾರಣೆಗೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.