ಬೆಂಗಳೂರು (www.vknews.in) : ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಜೂನ್ 30ರಿಂದ ರಾಜ್ಯಾದ್ಯಂತ ಆರಂಭವಾಗಲಿದೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಮನೆ ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಪರಿಶೀಲಿಸಲಿದ್ದಾರೆ.
ಈ ವೇಳೆ ನಾಗರಿಕರು ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಮಾಹಿತಿ ನೀಡಿದರೆ, ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಮುಂದುವರಿಯಲು ಹಾಗೂ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಲು ಅನುಕೂಲವಾಗಲಿದೆ.
ಪರಿಷ್ಕರಣೆ ವೇಳೆ ಏನೆಲ್ಲ ನಡೆಯಲಿದೆ..?
ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಮನೆಮನೆಗೆ ತೆರಳಿ ನಿಗದಿತ ನಮೂನೆಗಳನ್ನು ಭರ್ತಿ ಮಾಡಿಸಿಕೊಳ್ಳಲಿದ್ದಾರೆ. ಹೊಸ ಮತದಾರರ ಹೆಸರು ಸೇರ್ಪಡೆ, ಮೃತಪಟ್ಟವರ ಹೆಸರು ಕೈಬಿಡುವುದು, ಬೇರೆಡೆಗೆ ಸ್ಥಳಾಂತರಗೊಂಡವರ ಹೆಸರು ತೆಗೆದುಹಾಕುವುದು ಹಾಗೂ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಹೆಸರು ಇರುವವರ ವಿವರಗಳನ್ನು ಸರಿಪಡಿಸುವ ಕಾರ್ಯ ನಡೆಯಲಿದೆ.
ಇದಲ್ಲದೆ, ಮತದಾರರ ಗುರುತಿನ ಚೀಟಿಯಲ್ಲಿರುವ ಹೆಸರು, ವಿಳಾಸ ಅಥವಾ ಇತರೆ ಮಾಹಿತಿಯಲ್ಲಿ ದೋಷಗಳಿದ್ದರೆ ಅವುಗಳನ್ನು ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶವೂ ಕಲ್ಪಿಸಲಾಗಿದೆ.
ರಾಜ್ಯದಾದ್ಯಂತ 59 ಸಾವಿರಕ್ಕೂ ಅಧಿಕ BLOಗಳು ಈ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದು, 2026ರ ಮೇ 12ರ ಅಂಕಿ-ಅಂಶಗಳ ಪ್ರಕಾರ 5.55 ಕೋಟಿಗೂ ಹೆಚ್ಚು ಮತದಾರರ ವಿವರಗಳನ್ನು ಪರಿಷ್ಕರಿಸಲಾಗುತ್ತದೆ. ಪಾರದರ್ಶಕತೆಗಾಗಿ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಪ್ರತಿ ಮತಗಟ್ಟೆಗೆ ಬೂತ್ ಮಟ್ಟದ ಏಜೆಂಟರನ್ನು ನಿಯೋಜಿಸಿವೆ.
ಯಾವ ದಾಖಲೆಗಳು ಸಿದ್ಧವಾಗಿರಬೇಕು?
BLO ಮನೆಗೆ ಭೇಟಿ ನೀಡುವಾಗ ಈ ಕೆಳಗಿನ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಒಳಿತು:
ಪ್ರಮುಖ ದಿನಾಂಕಗಳು..
ಯಾವುದೇ ತಕರಾರು ಅಥವಾ ಅಧಿಕಾರಿಗಳ ನಿರ್ಧಾರದ ಬಗ್ಗೆ ಅಸಮಾಧಾನ ಇದ್ದರೆ, ಸಂಬಂಧಿತ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ.
ಹೆಚ್ಚಿನ ಮಾಹಿತಿಗಾಗಿ 1950 ಉಚಿತ ಸಹಾಯವಾಣಿಗೆ ಕರೆ ಮಾಡಬಹುದು. ಅಲ್ಲದೆ ECINET ಮೊಬೈಲ್ ಆ್ಯಪ್ ಅಥವಾ voters.eci.gov.in ಮೂಲಕವೂ ಮತದಾರರ ವಿವರಗಳನ್ನು ಪರಿಶೀಲಿಸಬಹುದು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.