ಬೆಂಗಳೂರು (www.vknews.in) : ಬೆಂಗಳೂರು ಸಮೀಪದ ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದನಹಳ್ಳಿ ಬಳಿಯ ಹೋಂಸ್ಟೇಯಲ್ಲಿ ಮಹಿಳೆಯೊಬ್ಬರು ನಿಗೂಢವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರೊಂದಿಗೆ ಇದ್ದ ಗೆಳೆಯ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪ್ರಜ್ಞಾಹೀನನಾಗಿದ್ದ ಸಂಜೀತ್ ಅಲಿ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳದಿಂದ ಹಗ್ಗ ಹಾಗೂ ಮಾತ್ರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಳಿಕ ಸಾವಿನ ನಿಖರ ಕಾರಣ ತಿಳಿಯಲಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮಹಿಳೆಯನ್ನು ಕೊಲೆಗೈದು ಬಳಿಕ ಆತ ಆತ್ಮಹತ್ಯೆಗೆ ಯತ್ನಿಸಿದ್ದಾನೆಯೇ ಅಥವಾ ಇಬ್ಬರೂ ಆತ್ಮಹತ್ಯೆಗೆ ಯತ್ನಿಸಿದ್ದಾರೆಯೇ ಎಂಬ ಎರಡೂ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೋಕ್ಸಿ ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಬ್ಬರೂ ದೀರ್ಘಕಾಲದಿಂದ ಪರಸ್ಪರ ಪ್ರೀತಿಸುತ್ತಿದ್ದು, ಕುಟುಂಬಗಳು ಅವರ ಸಂಬಂಧವನ್ನು ವಿರೋಧಿಸುತ್ತಿದ್ದವು ಎಂದು ತಿಳಿದುಬಂದಿದೆ. ಶನಿವಾರ ಇಬ್ಬರೂ ಹೋಂಸ್ಟೇಯಲ್ಲಿ ಕೊಠಡಿ ಬುಕ್ ಮಾಡಿಕೊಂಡಿದ್ದು, ಬಳಿಕ ಈ ದುರ್ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.