ನವದೆಹಲಿ (www.vknews.in) : ಅಯೋಧ್ಯೆ ರಾಮ ಮಂದಿರ ದೇಣಿಗೆ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವನ್ನು ತೀವ್ರವಾಗಿ ಟೀಕಿಸಿದ್ದಾರೆ. ಬಿಜ್ನೋರ್ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, “ರಾಮ ಮಂದಿರ ಟ್ರಸ್ಟ್ನಲ್ಲಿ ಒಬ್ಬ ಮುಸ್ಲಿಂ ಇದ್ದಿದ್ದರೆ, ಸರ್ಕಾರದ ಕ್ರಮ ಸಂಪೂರ್ಣ ಬೇರೆ ರೀತಿಯಲ್ಲಿರುತ್ತಿತ್ತು” ಎಂದು ವ್ಯಂಗ್ಯವಾಡಿದರು.
ಪ್ರಕರಣದ ಆರೋಪಿಗಳ ವಿರುದ್ಧ ಇದುವರೆಗೆ ಕಠಿಣ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಓವೈಸಿ, ಮುಸ್ಲಿಮರ ವಿರುದ್ಧ ನಡೆಯುವಂತೆ ಈ ಪ್ರಕರಣದಲ್ಲೂ ಬುಲ್ಡೋಜರ್ ಅಥವಾ ಎನ್ಕೌಂಟರ್ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂದು ಸರ್ಕಾರವನ್ನು ಪ್ರಶ್ನಿಸಿದರು. ಈ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.