ಬೆಂಗಳೂರು (www.vknews.in) : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಪದವಿಯಿಂದ ಕೆಳಗಿಳಿಸುವ ಕುರಿತು ಮಾತನಾಡಿರುವುದಾಗಿ ಹೇಳಲಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರದ್ದೆನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ, ಆಡಿಯೋ ತನ್ನದಲ್ಲ ಎಂದು ಸದಾನಂದ ಗೌಡ ಸ್ಪಷ್ಟಪಡಿಸಿದ್ದಾರೆ.
ದೆಹಲಿ ಮಟ್ಟದ ಬಿಜೆಪಿ ನಾಯಕರೊಂದಿಗೆ ನಡೆದ ಮಾತುಕತೆ ಎನ್ನಲಾದ ವೈರಲ್ ಆಡಿಯೋದಲ್ಲಿ, ವಿಜಯೇಂದ್ರ ಅವರನ್ನು ತಕ್ಷಣವೇ ಬದಲಾಯಿಸದೆ ಅಕ್ಟೋಬರ್ವರೆಗೆ ಮುಂದುವರಿಸಿ ಬಳಿಕ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾವಣೆ ಮಾಡುವಂತೆ ಸಲಹೆ ನೀಡಲಾಗಿದೆ ಎನ್ನಲಾಗಿದೆ. ಈಗಲೇ ಕ್ರಮ ಕೈಗೊಂಡರೆ ಬಿಜೆಪಿ ಲಿಂಗಾಯತ ವಿರೋಧಿ ಎಂಬ ಟೀಕೆ ಎದುರಾಗಬಹುದು ಎಂಬ ಅಭಿಪ್ರಾಯವೂ ಆಡಿಯೋದಲ್ಲಿ ಕೇಳಿಬಂದಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಡಿ.ವಿ. ಸದಾನಂದ ಗೌಡ, “ವೈರಲ್ ಆಗಿರುವ ಆಡಿಯೋ ನನ್ನದ್ದಲ್ಲ. ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಸತ್ಯಾಸತ್ಯತೆ ಹೊರಬರಲಿ, ತನಿಖೆ ನಡೆಯಲಿ. ಚಾರಿತ್ರ್ಯ ಹರಣ ಮಾಡುವ ಪ್ರಯತ್ನ ಬೇಡ” ಎಂದು ಹೇಳಿದ್ದಾರೆ. ಪಕ್ಷದ ವಿಚಾರಗಳನ್ನು ತಾವು ಯಾವಾಗಲೂ ಪಕ್ಷದ ವೇದಿಕೆ ಮತ್ತು ಕೋರ್ ಕಮಿಟಿಯಲ್ಲೇ ಚರ್ಚಿಸಿದ್ದೇನೆ. ಹೈಕಮಾಂಡ್ ಕೇಳಿದರೆ ಮಾತ್ರ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.