ಬೆಂಗಳೂರು (www.vknews.in): ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಸಂಯುಕ್ತ ಆಶ್ರಯದಲ್ಲಿ ಜುಲೈ 1ರಂದು ಪತ್ರಿಕಾ ದಿನಾಚರಣೆಯನ್ನು ನಗರದ ಗಾಂಧಿ ಭವನದಲ್ಲಿ ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ.ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಉದ್ಘಾಟಿಸಲಿದ್ದು, ಇದೇ ಸಂದರ್ಭದಲ್ಲಿ ಮಾಧ್ಯಮ ಅಕಾಡೆಮಿಯ ವಾರ್ಷಿಕ ವರದಿಯನ್ನು ಬಿಡುಗಡೆ ಮಾಡಲಿದ್ದಾರೆ.
ಸಂಸದ ಪಿ.ಸಿ. ಮೋಹನ್ ಹಾಗೂ ತೆಲಂಗಾಣ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕೆ. ಶ್ರೀನಿವಾಸ ರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಿಕಾ ದಿನಾಚರಣೆಯ ಅಂಗವಾಗಿ ‘ಡಿಜಿಟಲ್ ಯುಗದಲ್ಲಿ ನಿಜ ಪತ್ರಕರ್ತರು ಯಾರು?’ ಎಂಬ ವಿಷಯದ ಕುರಿತು ವಿಶೇಷ ವಿಚಾರ ಸಂಕಿರಣ ನಡೆಯಲಿದ್ದು, ವಾರ್ತಾಭಾರತಿ ಹಿರಿಯ ಪತ್ರಕರ್ತ ಅಬ್ದುಸ್ಸಲಾಂ ಪುತ್ತಿಗೆ ಪ್ರಧಾನ ಭಾಷಣ ಮಾಡಲಿದ್ದಾರೆ. ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಎಂ.ಎನ್. ಅನುಚೇತ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷೆ ಡಾ. ಆರ್. ಪೂರ್ಣಿಮಾ ಸೇರಿದಂತೆ ಪತ್ರಿಕಾ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.