ಮಂಗಳೂರು (www.vknews.in) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆ ಮಂಗಳೂರು ನಗರದ ಕಂಕನಾಡಿಯಲ್ಲಿ ಹೃದಯವಿದ್ರಾವಕ ದುರಂತ ಸಂಭವಿಸಿದೆ. ಹಳೆಯ ಹಂಚಿನ ಮನೆಯ ಮೇಲ್ಚಾವಣಿ ಹಾಗೂ ಗೋಡೆ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಂಗಳವಾರ ರಾತ್ರಿ ಆರಂಭವಾದ ನಿರಂತರ ಮಳೆಯಿಂದ ಮನೆ ಸಂಪೂರ್ಣ ತೇವಗೊಂಡಿದ್ದು, ಬುಧವಾರ ಮುಂಜಾನೆ ಏಕಾಏಕಿ ಮೇಲ್ಚಾವಣಿ ಮತ್ತು ಗೋಡೆ ಕುಸಿದು ಬಿದ್ದಿವೆ. ಈ ವೇಳೆ ಮನೆಯೊಳಗೆ ನಿದ್ರಿಸುತ್ತಿದ್ದ ಕುಟುಂಬದವರು ಅವಶೇಷಗಳಡಿ ಸಿಲುಕಿದ್ದರು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅವಶೇಷಗಳಡಿ ಸಿಲುಕಿದ್ದ ಒಬ್ಬ ಪುರುಷ ಮತ್ತು ಇಬ್ಬರು ಬಾಲಕಿಯರನ್ನು ಜೀವಂತವಾಗಿ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ. ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಯ ಕುರಿತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.