ಮಂಗಳೂರು (www.vknews.in) : ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2, 2026 (ಗುರುವಾರ) ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ (12ನೇ ತರಗತಿ ವರೆಗೆ) ಜಿಲ್ಲಾಡಳಿತ ರಜೆ ಘೋಷಿಸಿದೆ.
ಆದರೆ ಪದವಿ, ವೈದ್ಯಕೀಯ, ಡಿಪ್ಲೊಮಾ ಸೇರಿದಂತೆ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತವಾಗಿರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಹವಾಮಾನ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಿದ್ದಲ್ಲಿ ಮುಂದಿನ ಆದೇಶಗಳನ್ನು ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.