ನವದೆಹಲಿ (www.vknews.in) : ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭಾರತದ ಪ್ರಮುಖ ರಾಜಕೀಯ ನಾಯಕರಿಗೆ ಇರಾನ್ ಸರ್ಕಾರ ಅಧಿಕೃತ ಆಹ್ವಾನ ನೀಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಹಾಗೂ ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರಿಗೆ ಆಹ್ವಾನ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬೀನ್ ಅವರಿಗೂ ಆಹ್ವಾನ ಕಳುಹಿಸಲಾಗಿದೆ. ನ್ಯಾಯಮೂರ್ತಿ ಮಾರ್ಕಂಡೇ ಕಾಟ್ಜು ಸೇರಿದಂತೆ ಹಲವು ಗಣ್ಯರಿಗೂ ಆಹ್ವಾನ ನೀಡಲಾಗಿದೆ ಎಂದು ವರದಿಯಾಗಿದೆ.
ಜುಲೈ 5ರಿಂದ 9ರವರೆಗೆ ಟೆಹ್ರಾನ್, ಖೋಮ್ ಮತ್ತು ಮಶ್ಹದ್ ನಗರಗಳಲ್ಲಿ ಅಂತ್ಯಕ್ರಿಯೆ ಸಂಬಂಧಿತ ಕಾರ್ಯಕ್ರಮಗಳು ನಡೆಯಲಿವೆ. ಭಾರತ ಸರ್ಕಾರದ ಪರವಾಗಿ ಬಿಹಾರ ರಾಜ್ಯಪಾಲ ಸೈಯದ್ ಅಟಾ ಹಸ್ನೈನ್ ಹಾಗೂ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಪಬಿತ್ರಾ ಮಾರ್ಗರಿಟಾ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮಾರ್ಚ್ 1ರಂದು ಟೆಹ್ರಾನ್ನಲ್ಲಿರುವ ಅಧಿಕೃತ ನಿವಾಸದ ಮೇಲೆ ನಡೆದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು ಎಂದು ಇರಾನ್ ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕೃತ ಅಂತ್ಯಕ್ರಿಯೆ ಜುಲೈ 9ರಂದು ನಡೆಯಲಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.