ಚೆನ್ನೈ (www.vknews.in) : ಕಳೆದ ವರ್ಷ ತಮಿಳುನಾಡಿನ ಕರೂರಿನಲ್ಲಿ ನಡೆದ ಟಿವಿಕೆ ಸಮಾವೇಶದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನೀಡಿದ್ದ ಭರವಸೆಯನ್ನು ಮುಖ್ಯಮಂತ್ರಿ ವಿಜಯ್ ಈಡೇರಿಸಿದ್ದು, 32 ಕುಟುಂಬಗಳ ಸದಸ್ಯರಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರ ವಿತರಿಸಲು ಮುಂದಾಗಿದ್ದಾರೆ.
ಕರೂರಿಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ವಿಜಯ್, ದುರಂತದಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದು, ಕುಟುಂಬದ ಸದಸ್ಯರ ವಿದ್ಯಾರ್ಹತೆಗೆ ಅನುಗುಣವಾಗಿ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷದ ಸೆಪ್ಟೆಂಬರ್ 27ರಂದು ನಡೆದ ಟಿವಿಕೆ ಸಮಾವೇಶದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 41 ಮಂದಿ ಮೃತಪಟ್ಟಿದ್ದರು. ಈ ಘಟನೆ ತಮಿಳುನಾಡಿನಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಬಳಿಕ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ವಿಜಯ್ ಭರವಸೆ ನೀಡಿದ್ದರು.
ದುರಂತದಲ್ಲಿ 21 ತಿಂಗಳ ಮಗುವನ್ನು ಕಳೆದುಕೊಂಡ ವಿಮಲ್ ಪ್ರತಿಕ್ರಿಯಿಸಿ, “ಸಿಎಂ ವಿಜಯ್ ಕೊಟ್ಟ ಮಾತಿನಂತೆ ಈಗ ಕರೂರಿಗೆ ಬರುತ್ತಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ ನೀಡುತ್ತಿರುವುದು ಉತ್ತಮ ನಿರ್ಧಾರ” ಎಂದು ಹೇಳಿದ್ದಾರೆ. ಇದೇ ವೇಳೆ, ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದ ಸಿಬಿಐ ತನಿಖೆ ಮುಂದುವರಿದಿದ್ದು, ಸರ್ಕಾರದ ಈ ನಿರ್ಧಾರ ರಾಜಕೀಯ ಚರ್ಚೆಗೆ ಕಾರಣವಾಗಿದ್ದರೂ, ಸಂತ್ರಸ್ತ ಕುಟುಂಬಗಳು ಅದನ್ನು ಸ್ವಾಗತಿಸಿವೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.