ಟೆಹ್ರಾನ್ (www.vknews.in): ಇರಾನ್ನ ಪ್ರಮುಖ ಬಂದರು ನಗರಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದ್ದು, ಮಧ್ಯಪ್ರಾಚ್ಯದಲ್ಲಿ ಮತ್ತೊಮ್ಮೆ ಉದ್ವಿಗ್ನತೆ ತೀವ್ರಗೊಂಡಿದೆ.
ಇರಾನ್ನ ಸರ್ಕಾರಿ ಮಾಧ್ಯಮಗಳ ವರದಿ ಪ್ರಕಾರ, ಬಂದರ್ ಅಬ್ಬಾಸ್, ಸಿರಿಕ್, ಚಬಹಾರ್, ಬಂದರ್-ಇ-ಡೀರ್ ಹಾಗೂ ಅಸಲುಯೆ ಪ್ರದೇಶಗಳಲ್ಲಿ ಸ್ಫೋಟಗಳು ಸಂಭವಿಸಿವೆ. ಹಾರ್ಮುಜ್ ಜಲಸಂಧಿಯನ್ನು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ತಾತ್ಕಾಲಿಕವಾಗಿ ಪುನಃ ತೆರೆದ ಬೆನ್ನಲ್ಲೇ ಈ ದಾಳಿ ನಡೆದಿದೆ ಎಂದು ವರದಿಯಾಗಿದೆ.
ಹಾರ್ಮುಜ್ ಕರಾವಳಿ ಪ್ರದೇಶದಲ್ಲಿ ಸೈಪ್ರಸ್ ಧ್ವಜ ಹೊಂದಿದ್ದ ಸರಕು ಹಡಗಿನ ಮೇಲೆ ಇರಾನ್ ದಾಳಿ ನಡೆಸಿದೆ ಎಂದು ಅಮೆರಿಕ ಆರೋಪಿಸಿದೆ. ಆದರೆ, ಅನಧಿಕೃತ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕಾರಣ ಹಡಗಿನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ಐಆರ್ಜಿಸಿ ಈ ಹಿಂದೆ ಸ್ಪಷ್ಟಪಡಿಸಿತ್ತು.
ಇದೇ ವೇಳೆ, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ, ತಮ್ಮ ತಂದೆ ಅಲಿ ಖಮೇನಿ ಅವರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿಕೆ ನೀಡಿದ್ದು, “ಸೇಡು ತೀರಿಸಿಕೊಳ್ಳುವುದು ದೇಶದ ಸಂಕಲ್ಪ” ಎಂದು ಹೇಳಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯದಲ್ಲಿ ಭದ್ರತಾ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಪರಿಸ್ಥಿತಿಯ ಮೇಲೆ ಜಾಗತಿಕ ಸಮುದಾಯ ನಿಕಟವಾಗಿ ನಿಗಾ ವಹಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.