ಸುಳ್ಯ (www.vknews.in), ಜು. 11: ಅಪ್ರಾಪ್ತ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ನೆರೆಮನೆಯ ನಿವಾಸಿಯೊಬ್ಬನ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಮಂಜುನಾಥ ಎಂದು ಗುರುತಿಸಲಾಗಿದ್ದು, ಬಾಲಕಿಯೊಂದಿಗೆ ಪರಿಚಯ ಮತ್ತು ಸಲುಗೆ ಬೆಳೆಸಿಕೊಂಡಿದ್ದ ಆತ, ಜೂನ್ 22ರಿಂದ ಜುಲೈ 9ರ ಅವಧಿಯಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಬಾಲಕಿ ಶಾಲೆಗೆ ಗೈರಾಗಿದ್ದ ಹಿನ್ನೆಲೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಬಳಿಕ ಮುಖ್ಯೋಪಾಧ್ಯಾಯರು ನೀಡಿದ ದೂರಿನ ಆಧಾರದಲ್ಲಿ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ (BNS) 2023ರ ಸಂಬಂಧಿತ ಕಲಂಗಳು ಹಾಗೂ ಪೋಕ್ಸೋ ಕಾಯ್ದೆ–2012ರ ಕಲಂ 4, 5 ಮತ್ತು 6ರಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.