ಕಡಬ (www.vknews.in): ಹುಡುಗಿಯೊಬ್ಬಳ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಯುವಕರ ನಡುವೆ ಘರ್ಷಣೆ ನಡೆದಿದ್ದು, ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕಡಬ ನಿವಾಸಿ ಮೋನಿಷ್ (21) ನೀಡಿದ ದೂರಿನ ಪ್ರಕಾರ, ಜುಲೈ 10ರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಾಲೇಜು ರಸ್ತೆ ಜಂಕ್ಷನ್ ಬಳಿ ಶರತ್, ದೀಪಕ್ ಹಾಗೂ ವಿಶ್ವನಾಥ ಎಂಬವರು ಹುಡುಗಿಯ ಮದುವೆ ವಿಚಾರವಾಗಿ ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ದೂರಿನ ಆಧಾರದಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 84/2026ರಡಿ ಭಾರತೀಯ ನ್ಯಾಯ ಸಂಹಿತೆ (BNS)ಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಾಗಿದೆ. ಇದೇ ಘಟನೆಯ ಸಂಬಂಧ ಕುಟ್ರುಪ್ಪಾಡಿ ನಿವಾಸಿ ದೀಪಕ್ (33) ಪ್ರತಿದೂರು ದಾಖಲಿಸಿದ್ದು, ಮೋನಿಷ್ ತನ್ನನ್ನು ತಡೆದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ. ಈ ದೂರಿನ ಮೇರೆಗೆ ಅಪರಾಧ ಸಂಖ್ಯೆ 85/2026ರಡಿ ಮತ್ತೊಂದು ಪ್ರಕರಣ ದಾಖಲಾಗಿದ್ದು, ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಡಬ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.