ಟೆಹ್ರಾನ್ (www.vknews.in): ಅಮೆರಿಕದ ಹಸ್ತಕ್ಷೇಪ ಕೊನೆಗೊಳ್ಳುವವರೆಗೆ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಾಗುವುದು ಎಂದು ಇರಾನ್ ಘೋಷಿಸಿರುವುದಾಗಿ ವರದಿಯಾಗಿದೆ. ಮುಂದಿನ ಸೂಚನೆ ಬರುವವರೆಗೆ ಜಲಸಂಧಿಯಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಜಾರಿಯಲ್ಲಿರಲಿದ್ದು, ಅಕ್ರಮವಾಗಿ ಸಂಚರಿಸುವ ಹಡಗುಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ.
ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಸಮುದ್ರ ಭದ್ರತೆಗೆ ಅಪಾಯ ಉಂಟುಮಾಡಿದ ಹಡಗೊಂದನ್ನು ತಡೆದು ವಶಕ್ಕೆ ಪಡೆದಿರುವುದಾಗಿ ಹೇಳಿಕೊಂಡಿದೆ. ಆದರೆ, ಯಾವ ಹಡಗು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಬಹಿರಂಗಪಡಿಸಿಲ್ಲ.
ಇದೇ ವೇಳೆ, ಇರಾನ್ ವಿರುದ್ಧ ಮೂರನೇ ಹಂತದ ದಾಳಿಯನ್ನು ಆರಂಭಿಸಿರುವುದಾಗಿ ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಘೋಷಿಸಿದೆ. ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುವ ವಾಣಿಜ್ಯ ಹಡಗುಗಳು ಹಾಗೂ ನಾಗರಿಕ ನಾವಿಕರ ಸುರಕ್ಷತೆಯನ್ನು ಖಚಿತಪಡಿಸುವುದಾಗಿ ಅಮೆರಿಕ ತಿಳಿಸಿದೆ.
ಇನ್ನೊಂದೆಡೆ, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಸೇಡು ತೀರಿಸಿಕೊಳ್ಳುವುದಾಗಿ ಅವರ ಉತ್ತರಾಧಿಕಾರಿ ಎಂದು ಪರಿಗಣಿಸಲ್ಪಡುವ ಮೊಜ್ತಬಾ ಖಮೇನಿ ಪ್ರತಿಜ್ಞೆ ಮಾಡಿದ್ದಾರೆ ಎಂದು ವರದಿಯಾಗಿದೆ. ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ ಜನರಿಗೆ ಧನ್ಯವಾದ ಸಲ್ಲಿಸಿದ ಅವರು, ದೇಶದ ಹಿತಾಸಕ್ತಿಗಾಗಿ ಈ ಪ್ರತಿಜ್ಞೆ ಮಾಡುತ್ತಿರುವುದಾಗಿ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.