ಬೆಂಗಳೂರು (www.vknews.in): ಪಾರ್ಸೆಲ್ ವಿತರಿಸಲು ಬಂದಿದ್ದ ಡೆಲಿವರಿ ಬಾಯ್, ಶೌಚಾಲಯ ಬಳಸುವ ನೆಪದಲ್ಲಿ ಮಹಿಳೆಯೊಬ್ಬರ ಮನೆಗೆ ಬಲವಂತವಾಗಿ ನುಗ್ಗಿ ಅಸಭ್ಯವಾಗಿ ವರ್ತಿಸಿದ ಘಟನೆ ಬೆಂಗಳೂರಿನ ಮಾರತ್ತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ವಿಜಯ್ ಮಲ್ಲಿಕಾರ್ಜುನ್ ಕಾಮತ್ ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿ ಮಾರತ್ತಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಮಾರತ್ತಹಳ್ಳಿಯ ಅಪಾರ್ಟ್ಮೆಂಟ್ಗೆ ಪಾರ್ಸೆಲ್ ತಲುಪಿಸಲು ಬಂದಿದ್ದ ಡೆಲಿವರಿ ಬಾಯ್, ಶೌಚಾಲಯ ಬಳಸಲು ಅವಕಾಶ ನೀಡುವಂತೆ ಮಹಿಳೆಯನ್ನು ಕೇಳಿದ್ದಾನೆ. ಮನೆಯಲ್ಲಿ ತಾನು ಒಬ್ಬಳೇ ಇದ್ದ ಕಾರಣ ಮಹಿಳೆ ಅದಕ್ಕೆ ನಿರಾಕರಿಸಿದ್ದಾರೆ. ಆದರೆ, ಮಹಿಳೆಯ ಅನುಮತಿ ಇಲ್ಲದಿದ್ದರೂ ಆರೋಪಿ ಮನೆಯೊಳಗೆ ಪ್ರವೇಶಿಸಿ ಶೌಚಾಲಯ ಬಳಸಿದ್ದಾನೆ. ಬಳಿಕ ಮಹಿಳೆ ಒಂಟಿಯಾಗಿರುವುದನ್ನು ಗಮನಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಘಟನೆಯಿಂದ ಆತಂಕಗೊಂಡ ಮಹಿಳೆ ಘಟನೆಯ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಮಾರತ್ತಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.