ಟೆಹ್ರಾನ್ (www.vknews.in): ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ನಿರಂತರ ವೈಮಾನಿಕ ದಾಳಿಗಳಿಗೆ ಪ್ರತಿಯಾಗಿ, ಈ ಪ್ರದೇಶದಲ್ಲಿನ ‘ಶತ್ರು ನೆಲೆಗಳು’ ಎಂದು ಗುರುತಿಸಲಾದ ಸ್ಥಳಗಳ ಮೇಲೆ ಇರಾನ್ ಸೇನೆ ಹಾಗೂ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಭಾರೀ ಪ್ರಮಾಣದ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿರುವುದಾಗಿ ಇರಾನ್ನ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ.
ಇರಾನ್ನ ನೂರ್ ನ್ಯೂಸ್ ವರದಿ ಪ್ರಕಾರ, ಕಳೆದ 48 ಗಂಟೆಗಳಲ್ಲಿ ‘ಶತ್ರುಗಳ ಚಲನವಲನ’ ಪತ್ತೆಯಾದ ಹಿನ್ನೆಲೆಯಲ್ಲಿ ಗುರುತಿಸಲಾದ ಗುರಿಗಳನ್ನು ಉದ್ದೇಶಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ. ಅಮೆರಿಕದ ನಿರಂತರ ದಾಳಿಗಳಿಗೆ ಪ್ರತಿಕ್ರಿಯೆಯಾಗಿಯೇ ಈ ದಾಳಿಗಳನ್ನು ಕೈಗೊಳ್ಳಲಾಗಿದೆ ಎಂದು ಇರಾನ್ನ ಮಿಲಿಟರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಶತ್ರು ನೆಲೆಗಳು’ ಎಂದು ಗುರುತಿಸಲಾದ ಪ್ರದೇಶಗಳ ಮೇಲೆ ಕ್ಷಿಪಣಿಗಳು ಹಾಗೂ ಡ್ರೋನ್ಗಳ ಮೂಲಕ ವ್ಯಾಪಕ ದಾಳಿ ನಡೆಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ, ದಾಳಿಯಲ್ಲಿ ಯಾವ ಸ್ಥಳಗಳು ಗುರಿಯಾಗಿವೆ, ಎಷ್ಟು ಪ್ರಮಾಣದ ಹಾನಿಯಾಗಿದೆ ಅಥವಾ ಸಾವು-ನೋವು ಸಂಭವಿಸಿದ್ದೆಯೇ ಎಂಬ ಬಗ್ಗೆ ಇರಾನ್ ಅಧಿಕಾರಿಗಳು ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ. ಈ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.