ನಾಗ್ಪುರ (www.vknews.in): ಕೇವಲ 10 ರೂಪಾಯಿ ಹಣದ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಕಪಿಲ್ನಗರ ಪ್ರದೇಶದಲ್ಲಿ ಭಾನುವಾರ ನಡೆದಿದೆ. ಮೃತರನ್ನು ಮನೋಜ್ ವಿಶ್ವನಾಥ್ ಯಾದವ್ (45) ಎಂದು ಗುರುತಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಟೀ ವ್ಯಾಪಾರಿ ಕೈಲಾಶ್ ಲಾಲ್ಚಂದ್ ಗನ್ವೀರ್ (42) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆ ತೆರವುಗೊಳಿಸುವ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕ ಮನೋಜ್ ಯಾದವ್, ಬಳಿಕ ಸಮೀಪದ ಟೀ ಅಂಗಡಿಗೆ ತೆರಳಿದ್ದರು.
ಈ ವೇಳೆ ಚಹಾ ಮತ್ತು ತಂಬಾಕಿಗೆ 10 ರೂಪಾಯಿ ಹಣ ಕೇಳಿದ ವಿಚಾರದಲ್ಲಿ ಟೀ ವ್ಯಾಪಾರಿ ಹಾಗೂ ಮನೋಜ್ ನಡುವೆ ವಾಗ್ವಾದ ನಡೆದಿದೆ. ಜಗಳ ತಾರಕಕ್ಕೇರಿದಾಗ ಮನೋಜ್, ಟೀ ವ್ಯಾಪಾರಿಗೆ ಆತನ ಪತ್ನಿಯ ಎದುರಲ್ಲೇ ಕಪಾಳಮೋಕ್ಷ ಮಾಡಿದ್ದಾನೆ ಎನ್ನಲಾಗಿದೆ.
ಇದರಿಂದ ಕೋಪಗೊಂಡ ಆರೋಪಿ ಅಂಗಡಿಯಲ್ಲಿದ್ದ ಚಾಕುವಿನಿಂದ ಮನೋಜ್ ಅವರ ಕುತ್ತಿಗೆಗೆ ಇರಿದಿದ್ದಾನೆ. ತೀವ್ರವಾಗಿ ಗಾಯಗೊಂಡ ಮನೋಜ್ ಅವರನ್ನು ತಕ್ಷಣ ಮಾಯೊ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.