ಅಲಿಗಢ (www.vknews.in): ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಚರ್ರಾ ಗ್ರಾಮದಲ್ಲಿ 14 ವರ್ಷದ ಮುಸ್ಲಿಂ ಬಾಲಕಿಯನ್ನು ಅಪಹರಿಸಿ, ಪ್ರಜ್ಞೆ ತಪ್ಪುವಂತೆ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಬಾಲಕಿ ತರಕಾರಿ ಖರೀದಿಸಲು ಮನೆಯಿಂದ ತೆರಳಿದ್ದು, ಬಹಳ ಹೊತ್ತಾದರೂ ಮನೆಗೆ ಹಿಂದಿರುಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ಆರಂಭಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಬಳಿಕ ಗ್ರಾಮದ ಹೊರವಲಯದ ಹೊಲವೊಂದರಲ್ಲಿ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯ ದೇಹದಲ್ಲಿ ಗಾಯಗಳಿದ್ದು, ಬಟ್ಟೆಗಳು ಹರಿದ ಸ್ಥಿತಿಯಲ್ಲಿದ್ದವು. ಈ ಪ್ರಕರಣ ಸಂಬಂಧ ಕಿಶನ್ ಗೋಪಾಲ್ ವಾಲ್ಮೀಕಿ ಮತ್ತು ಸಂಜು ವಾಲ್ಮೀಕಿ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತೆಯ ಕುಟುಂಬದ ದೂರಿನ ಪ್ರಕಾರ, ಆರೋಪಿಗಳು ಮೊದಲು ಬಾಲಕಿಗೆ ಪ್ರಜ್ಞೆ ತಪ್ಪಿಸುವ ವಸ್ತುವನ್ನು ನೀಡಿ, ಬಳಿಕ ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ ಪೋಕ್ಸೊ (POCSO) ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ (BNS)ಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಲಾಗಿದ್ದು, ಬಾಲಕಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
A 14-year-old girl was allegedly kidnapped and gang-raped by two Hindu men in Uttar Pradesh's Aligarh district on Saturday. The incident occurred in Charra village. According to the survivor's mother, her daughter had gone to buy vegetables. When she did not return, her father… pic.twitter.com/Wkz4fxw9BV — The Siasat Daily (@TheSiasatDaily) July 12, 2026
A 14-year-old girl was allegedly kidnapped and gang-raped by two Hindu men in Uttar Pradesh's Aligarh district on Saturday.
The incident occurred in Charra village. According to the survivor's mother, her daughter had gone to buy vegetables. When she did not return, her father… pic.twitter.com/Wkz4fxw9BV
— The Siasat Daily (@TheSiasatDaily) July 12, 2026
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.