ನವದೆಹಲಿ (www.vknews.in): ಸಾರ್ವಜನಿಕ ಪರೀಕ್ಷೆಗಳಲ್ಲಿನ ಪ್ರಶ್ನೆಪತ್ರಿಕೆ ಸೋರಿಕೆಗೆ ಕಡಿವಾಣ ಹಾಕುವ ಉದ್ದೇಶದ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆ) ತಿದ್ದುಪಡಿ ಮಸೂದೆ–2026ಕ್ಕೆ ಸಂಸತ್ತಿನ ಉಭಯ ಸದನಗಳ ಅನುಮೋದನೆ ದೊರೆತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಸೆಲ್ಫೀ ವಿಡಿಯೋ ಮೂಲಕ ಸಂದೇಶ ನೀಡಿದ್ದಾರೆ.
ವಿಶ್ವಾಸಾರ್ಹ ಹಾಗೂ ಪಾರದರ್ಶಕ ಪರೀಕ್ಷಾ ವ್ಯವಸ್ಥೆ ನಿರ್ಮಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದ ಪ್ರಧಾನಿ, ವಿಶೇಷ ಕಾರ್ಯಪಡೆಗಳ ರಚನೆ, ತ್ವರಿತ ನ್ಯಾಯಾಲಯಗಳ ಸ್ಥಾಪನೆ ಹಾಗೂ ರಾಜ್ಯಗಳ ಸಲಹೆಗಳನ್ನು ಅಳವಡಿಸಿಕೊಂಡು ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ ಎಂದರು.
“ಹಲವು ವರ್ಷಗಳಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆ ಉಂಟುಮಾಡುತ್ತಿದ್ದ ಪ್ರಶ್ನೆಪತ್ರಿಕೆ ಸೋರಿಕೆ ಜಾಲಗಳಿಗೆ ಕಾನೂನು ಮೂಲಕ ಕಠಿಣ ಕಡಿವಾಣ ಹಾಕುವ ಸಮಯ ಬಂದಿದೆ. ದೇಶದ ಮಕ್ಕಳ ಭವಿಷ್ಯದೊಂದಿಗೆ ಆಟವಾಡುವ ಪೇಪರ್ ಲೀಕ್ ಮಾಫಿಯಾವನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಪ್ರಧಾನಿ ಎಚ್ಚರಿಕೆ ನೀಡಿದರು.
ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವ್ಯಾಪಕ ಚರ್ಚೆಯ ಬಳಿಕ ಮಸೂದೆ ಅಂಗೀಕಾರಗೊಂಡಿದ್ದು, ದೇಶದಲ್ಲಿ ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ನಿರ್ಮಾಣದತ್ತ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಪ್ರಧಾನಿ ಹೇಳಿದರು. ಇದೇ ವೇಳೆ, ಪರೀಕ್ಷಾ ವ್ಯವಸ್ಥೆಯನ್ನು ಇನ್ನಷ್ಟು ಬಲಿಷ್ಠ ಹಾಗೂ ಪಾರದರ್ಶಕಗೊಳಿಸುವ ಕಾರ್ಯ ಮುಂದುವರಿಯಲಿದೆ ಎಂದು ಭರವಸೆ ನೀಡಿದರು.
ಹೊಸ ಕಾನೂನಿನ ಪ್ರಕಾರ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಲ್ಲಿ ತಪ್ಪಿತಸ್ಥರಿಗೆ 5ರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹50 ಲಕ್ಷದವರೆಗೆ ದಂಡ ವಿಧಿಸಲಾಗುತ್ತದೆ. ಸಂಘಟಿತ ಪೇಪರ್ ಲೀಕ್ ಜಾಲಗಳಿಗೆ ಕನಿಷ್ಠ 7 ವರ್ಷ ಜೈಲು ಶಿಕ್ಷೆ ಹಾಗೂ ₹10 ಕೋಟಿವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ.
Parliament passes a Bill that makes our examination system more robust! pic.twitter.com/OEvLKXoUaf — Narendra Modi (@narendramodi) July 30, 2026
Parliament passes a Bill that makes our examination system more robust! pic.twitter.com/OEvLKXoUaf
— Narendra Modi (@narendramodi) July 30, 2026
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.