ಮಂಗಳೂರು (www.vknews.in): ಭಾರತೀಯ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ (ಪಿಯು) ಕಾಲೇಜುಗಳಿಗೆ ಆಗಸ್ಟ್ 3 (ಸೋಮವಾರ ) ರಜೆ ಘೋಷಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಪ್ರಕಟಣೆ ಹೊರಡಿಸಿದ್ದು, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.