ಮಲಪ್ಪುರಂ (www.vknews.in): ಕೇರಳದ ಮಲಪ್ಪುರಂ ಜಿಲ್ಲೆಯ ತಿರುವಳ್ಳಿ ಸಮೀಪದ ಕಂದಮಂಗಲಂನಲ್ಲಿ ಕಾಲುವೆಯಲ್ಲಿ ಕೊಚ್ಚಿಹೋಗಿ ಎರಡೂವರೆ ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತ ಬಾಲಕನನ್ನು ಕಣ್ಣಮಂಗಲಂ ನಿವಾಸಿಗಳಾದ ಅಬ್ದುಲ್ ಮುನೀರ್ ಹಾಗೂ ತಸ್ಲೀಮಾ ಭಾನು ದಂಪತಿಯ ಪುತ್ರ ಅಬ್ದುಲ್ ಮುಹೈನ್ (2½) ಎಂದು ಗುರುತಿಸಲಾಗಿದೆ.
ಬಾಲಕ ಕಾಲುವೆಯಲ್ಲಿ ಕೊಚ್ಚಿಹೋಗಿದ್ದು, ಸ್ಥಳೀಯರು ಹಾಗೂ ಅಧಿಕಾರಿಗಳ ಶೋಧ ಕಾರ್ಯದ ಬಳಿಕ ಮೃತದೇಹ ಪತ್ತೆಯಾಗಿದೆ. ಈ ದುರ್ಘಟನೆಯಿಂದ ಕುಟುಂಬಸ್ಥರು ತೀವ್ರ ದುಃಖಕ್ಕೊಳಗಾಗಿದ್ದು, ಸ್ಥಳೀಯರಲ್ಲೂ ಶೋಕದ ವಾತಾವರಣ ನಿರ್ಮಾಣವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.