ಸಂಪಾಜೆ (www.vknews.in): ಜುಲೈ 18ರಂದು ಅನುಮಾನಾಸ್ಪದವಾಗಿ ಸಾವಿಗೀಡಾದ ಸಂಪಾಜೆ ಗ್ರಾಮದ ಕಡೆಪಾಲ ಆಲಿಗುಡ್ಡೆಯ ಫಾತಿಮತ್ ನಿಶಾನಾ ಪ್ರಕರಣದ ಆರೋಪಿ ಅಲವಿಯವರ ಮನೆಗೆ ಕಳ್ಳರು ಕನ್ನ ಹಾಕಲು ಯತ್ನಿಸಿರುವ ಘಟನೆ ವರದಿಯಾಗಿದೆ. ಕಳ್ಳರು ಮನೆಯ ಹಿಂಭಾಗದ ಗ್ರಿಲ್ ಮುರಿದು ಒಳನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದಾರೆ. ಮನೆಯೊಳಗೆ ಶೋಧ ನಡೆಸಿ ಬಟ್ಟೆ ಹಾಗೂ ಇತರೆ ಸಾಮಗ್ರಿಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದರೂ, ಯಾವುದೇ ಬೆಲೆಬಾಳುವ ವಸ್ತುಗಳು ಸಿಗದ ಕಾರಣ ಬರಿಗೈಯಲ್ಲಿ ಪರಾರಿಯಾಗಿದ್ದಾರೆ.
ಕುಟುಂಬದ ಸದಸ್ಯರು ಮನೆಯಲ್ಲಿ ಇದ್ದ ಬೆಲೆಬಾಳುವ ವಸ್ತುಗಳನ್ನು ಮೊದಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರಿಂದ ಕಳ್ಳರ ಯತ್ನ ವಿಫಲವಾಗಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಇಬ್ರಾಹಿಂ (ಅಬ್ದುಲ್ ರೆಹಮಾನ್ ಅವರ ಪುತ್ರ) ನೀಡಿದ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.