ಉಡುಪಿ (www.vknews.in): ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಹಾಗೂ ಬಿಜೆಪಿ ಮುಖಂಡ ಮಂಜುಕೊಳ ಅವರ ಪತ್ನಿ ಲಕ್ಷ್ಮೀ ಮಂಜುನಾಥ್ ಅವರು ಶನಿವಾರ ಮಧ್ಯಾಹ್ನ ದಾರುಣವಾಗಿ ಮೃತಪಟ್ಟಿದ್ದಾರೆ. ನಗರದ ನೈವೇದ್ಯ ಹೋಟೆಲ್ ಸಮೀಪದ ಲಯನ್ಸ್ ಸರ್ಕಲ್ ಬಳಿ ಈ ದುರ್ಘಟನೆ ಸಂಭವಿಸಿದೆ.
ಮಾಹಿತಿಯ ಪ್ರಕಾರ, ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಬಳಿಕ ಲಕ್ಷ್ಮೀ ಮಂಜುನಾಥ್ ಅವರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಉಡುಪಿ ಶಾಸಕರ ಕಚೇರಿಗೆ ತೆರಳಿದ್ದರು. ಅಲ್ಲಿಂದ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದು ಉಡುಪಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಅಪಘಾತದ ಕುರಿತು ತನಿಖೆ ಆರಂಭಿಸಿದ್ದಾರೆ. ಲಕ್ಷ್ಮೀ ಮಂಜುನಾಥ್ ಅವರ ಅಕಾಲಿಕ ನಿಧನಕ್ಕೆ ರಾಜಕೀಯ ಮುಖಂಡರು, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.