ಶಿವಮೊಗ್ಗ (www.vknews.in): ನಾಯಿ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಎರಡು ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಅಂಡಿಗೆ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನು ಶಿಕಾರಿಪುರ ತಾಲೂಕಿನ ಉಡುಗಣಿ ಗ್ರಾಮದ ಸಾದಿಕ್ ಮತ್ತು ಆಯಿಷಾ ದಂಪತಿಯ ಪುತ್ರ ಕಲಂದರ್ (2) ಎಂದು ಗುರುತಿಸಲಾಗಿದೆ.
ಕುಟುಂಬವು ಆಯಿಷಾ ಅವರ ತವರೂರಾದ ಅಂಡಿಗೆ ಗ್ರಾಮದಲ್ಲಿ ವಾಸವಾಗಿತ್ತು. ಕಳೆದ ಜೂನ್ 18ರಂದು ಕಲಂದರ್ ಮನೆಯ ಸಮೀಪ ಆಟವಾಡುತ್ತ ರಸ್ತೆ ಕಡೆಗೆ ತೆರಳಿದ್ದ ವೇಳೆ ನಾಯಿಯೊಂದು ಏಕಾಏಕಿ ದಾಳಿ ನಡೆಸಿ, ಮುಖ ಸೇರಿದಂತೆ ದೇಹದ ಹಲವು ಭಾಗಗಳಿಗೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿತ್ತು.
ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆ ಹಾಗೂ ಬಳಿಕ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ಮತ್ತೆ ಆರೋಗ್ಯದಲ್ಲಿ ಗಂಭೀರ ಸಮಸ್ಯೆಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರ ಸತತ ಚಿಕಿತ್ಸೆಯ ನಡುವೆಯೂ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಈ ಘಟನೆ ಕುಟುಂಬಸ್ಥರಲ್ಲಿ ಆಕ್ರಂದನ ಮೂಡಿಸಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.