ಮಂಗಳೂರು (www.vknews.in): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ಶಾಲೆ ಹಾಗೂ ದ್ವಿತೀಯ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ನಕಲಿ ಸಂದೇಶಗಳು ಜಿಲ್ಲಾಧಿಕಾರಿಯ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ರಜೆ ಕುರಿತು ಹರಡುತ್ತಿರುವ ಆದೇಶಗಳು ಸಂಪೂರ್ಣ ನಕಲಿ ಎಂದು ಸ್ಪಷ್ಟಪಡಿಸಿರುವ ಅವರು, ವಿಪತ್ತು ಅಥವಾ ರಜೆ ಕುರಿತಂತೆ ಸುಳ್ಳು ಮಾಹಿತಿ ಹಂಚಿ ಸಾರ್ವಜನಿಕರಲ್ಲಿ ಗೊಂದಲ ಮತ್ತು ಆತಂಕ ಸೃಷ್ಟಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ವಿಪತ್ತು ನಿರ್ವಹಣಾ ಕಾಯ್ದೆ, 2005ರ ಸೆಕ್ಷನ್ 54 ಅನ್ನು ಉಲ್ಲೇಖಿಸಿ, ವಿಪತ್ತು ಅಥವಾ ಅದರ ತೀವ್ರತೆ ಬಗ್ಗೆ ಸುಳ್ಳು ಮಾಹಿತಿ ನೀಡಿ ಅಥವಾ ಹರಡಿ ಭಯಭೀತಿಯನ್ನು ಉಂಟುಮಾಡಿದರೆ, ತಪ್ಪಿತಸ್ಥರಿಗೆ ಒಂದು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸುವ ಅವಕಾಶವಿದೆ ಎಂದು ಎಚ್ಚರಿಸಿದ್ದಾರೆ.
ಸಾರ್ವಜನಿಕರು ರಜೆ ಅಥವಾ ವಿಪತ್ತು ಸಂಬಂಧಿತ ಮಾಹಿತಿಗಾಗಿ ಜಿಲ್ಲಾಡಳಿತದ ಅಧಿಕೃತ ಪ್ರಕಟಣೆಗಳನ್ನು ಮಾತ್ರ ನಂಬುವಂತೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಪರಿಶೀಲಿಸದ ಸಂದೇಶಗಳನ್ನು ಹಂಚದಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.