ಲಕ್ನೋ (www.vknews.in): ವಯಸ್ಕ ಮಹಿಳೆಯರು ಇಸ್ಲಾಂಗೆ ಮತಾಂತರಗೊಳ್ಳುವುದು ಅಥವಾ ತಮ್ಮ ಆಯ್ಕೆಯ ಪುರುಷನೊಂದಿಗೆ ವಿವಾಹವಾಗುವುದು ಅವರ ವೈಯಕ್ತಿಕ ಹಕ್ಕಾಗಿದ್ದು, ಇದರಲ್ಲಿ ಯಾರೂ ಹಸ್ತಕ್ಷೇಪ ಮಾಡಬಾರದು ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
ಜೋಯಾ ದಿವ್ಯಾ ಭಾಟಿಯಾ ಅಲಿಯಾಸ್ ದಿವ್ಯಾ ಭಾಟಿಯಾ (20) ಹಾಗೂ ಅನ್ಶು ಭಾಟಿಯಾ ಅಲಿಯಾಸ್ ಅಮಿನಾ ಅನ್ಶು ಭಾಟಿಯಾ (35) ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಸಂದೀಪ್ ಜೈನ್ ಈ ಅಭಿಪ್ರಾಯ ವ್ಯಕ್ತಪಡಿಸಿದರು.
ಅರ್ಜಿಯಲ್ಲಿ, ಇಸ್ಲಾಂಗೆ ಮತಾಂತರಗೊಂಡು ತಮ್ಮ ಆಯ್ಕೆಯ ಪುರುಷರನ್ನು ವಿವಾಹವಾದ ಬಳಿಕ ತಂದೆ ಹಾಗೂ ಸ್ಥಳೀಯ ಪೊಲೀಸರ ಸಹಾಯದಿಂದ ತಮ್ಮನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಮಹಿಳೆಯರು ಆರೋಪಿಸಿದ್ದರು.
ವಿಚಾರಣೆ ವೇಳೆ ಅರ್ಜಿದಾರರು ವಯಸ್ಕರಾಗಿದ್ದು, ತಮ್ಮ ಜೀವನದ ಕುರಿತು ಸ್ವತಂತ್ರ ನಿರ್ಧಾರ ಕೈಗೊಳ್ಳುವ ಹಕ್ಕು ಹೊಂದಿದ್ದಾರೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿತು. ಪ್ರಕರಣದ ಮುಂದಿನ ವಿಚಾರಣೆಯನ್ನು ಆಗಸ್ಟ್ 6ಕ್ಕೆ ನಿಗದಿಪಡಿಸಿರುವ ನ್ಯಾಯಾಲಯ, ಮಹಿಳೆಯರನ್ನು ಖುದ್ದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿದೆ. ಹಾಜರುಪಡಿಸಲು ವಿಫಲವಾದಲ್ಲಿ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಕಾರಣ ವಿವರಿಸುವ ಪ್ರಮಾಣಪತ್ರ (ಅಫಿಡವಿಟ್) ಸಲ್ಲಿಸುವಂತೆ ನಿರ್ದೇಶಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.