ಮಂಗಳೂರು (www.vknews.in): ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಆಗಸ್ಟ್ 4 (ಮಂಗಳವಾರ) ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹೊರಡಿಸಿರುವ ಆದೇಶದಂತೆ, ಮಂಗಳೂರು ಉಪವಿಭಾಗದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು (10ನೇ ತರಗತಿವರೆಗೆ) ಮತ್ತು ಎಲ್ಲಾ ವಸತಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು (12ನೇ ತರಗತಿವರೆಗೆ), ಎಲ್ಲಾ ಐಟಿಐ, ಡಿಪ್ಲೊಮಾ ಕಾಲೇಜುಗಳು ಹಾಗೂ ವಸತಿ ಶಾಲೆ-ಕಾಲೇಜುಗಳಿಗೂ ರಜೆ ನೀಡಲಾಗಿದೆ.
ಜಿಲ್ಲಾಡಳಿತದ ಆದೇಶ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ-2005ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಪಾಲಕರು ಮಕ್ಕಳನ್ನು ನದಿ, ಕೆರೆ, ತಗ್ಗು ಪ್ರದೇಶ ಹಾಗೂ ಸಮುದ್ರ ತೀರಗಳಿಗೆ ಕರೆದೊಯ್ಯಬಾರದು ಎಂದು ಜಿಲ್ಲಾಡಳಿತ ಮನವಿ ಮಾಡಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ. ಪ್ರಕೃತಿ ವಿಕೋಪ ಸಂಬಂಧಿತ ತುರ್ತು ಸಹಾಯಕ್ಕಾಗಿ 1077 (ಟೋಲ್ ಫ್ರೀ) ಅಥವಾ 0824-2442590 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.