ಬೆಂಗಳೂರು (www.vknews.in): ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರ ಹೇಳಿಕೆಗಳಿಗೆ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ತೀವ್ರ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ರಾಮ ಮಂದಿರದ ವಿಚಾರವನ್ನು ಉಲ್ಲೇಖಿಸಿ ಕಂಗನಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜೆನ್-ಝಿ ಯುವಕರ ಪ್ರತಿಭಟನೆ ಕುರಿತು ಕಂಗನಾ ನೀಡಿದ್ದ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ರಮ್ಯಾ, “ಗೌರವದ ಬಗ್ಗೆ ಪಾಠ ಹೇಳುವ ಮೊದಲು ತಮ್ಮ ಹಿಂದಿನ ಹೇಳಿಕೆಗಳನ್ನು ನೆನಪಿಸಿಕೊಳ್ಳಬೇಕು” ಎಂದು ತಿರುಗೇಟು ನೀಡಿದ್ದಾರೆ.
ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ ವ್ಯಂಗ್ಯವಾಡಿರುವ ರಮ್ಯಾ, “ಕೆಲವರಿಗೆ ಮೋದಿ ದೇವರಂತೆ ಕಾಣುತ್ತಾರೆ ಎಂದು ಹೇಳಲಾಗುತ್ತದೆ. ಆದರೆ ರಾಮ ನನ್ನ ಪಾಲಿಗೆ ದೇವರು. ರಾಮ ಮಂದಿರದ ವಿಚಾರದಲ್ಲಿ ನನ್ನ ಧಾರ್ಮಿಕ ಭಾವನೆಗಳಿಗೆ ನೋವಾಗಿದೆ. ಆಗ ಎಲ್ಲಿತ್ತು ಆಕ್ರೋಶ?” ಎಂದು ಪ್ರಶ್ನಿಸಿದ್ದಾರೆ.
ಇದರ ಜೊತೆಗೆ, 2020ರ ರೈತರ ಪ್ರತಿಭಟನೆ ವೇಳೆ ಕಂಗನಾ ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಉಲ್ಲೇಖಿಸಿದ ರಮ್ಯಾ, “ಆ ರೈತ ಮಹಿಳೆ ಕೋಟ್ಯಂತರ ಭಾರತೀಯರಿಗೆ ಅನ್ನದಾತೆ, ದೇವರ ಸಮಾನ. ಆಗ ಅವರ ಭಾವನೆಗಳಿಗೆ ಧಕ್ಕೆಯಾಗಿರಲಿಲ್ಲವೇ?” ಎಂದು ಕಿಡಿಕಾರಿದ್ದಾರೆ.
ರಮ್ಯಾ ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ಕೆಲವರು ಅವರ ಅಭಿಪ್ರಾಯವನ್ನು ಬೆಂಬಲಿಸುತ್ತಿದ್ದರೆ, ಮತ್ತಷ್ಟು ಮಂದಿ ಕಂಗನಾ ಪರವಾಗಿ ಪ್ರತಿಕ್ರಿಯಿಸುತ್ತಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.