ಪಾಟ್ನಾ (www.vknews.in): ಜನ್ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಬಿಹಾರದ ಬಂಕಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದು, ಕಳೆದ 30 ವರ್ಷಗಳಿಂದ ಬಿಜೆಪಿಯ ಭದ್ರಕೋಟೆಯಾಗಿದ್ದ ಕ್ಷೇತ್ರವನ್ನು ತನ್ನದಾಗಿಸಿಕೊಂಡಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ, ಬಿಜೆಪಿ ಅಭ್ಯರ್ಥಿ ನೀರಜ್ ಕುಮಾರ್ ಸಿನ್ಹಾ ಅವರನ್ನು 19,246 ಮತಗಳ ಅಂತರದಿಂದ ಸೋಲಿಸಿ ಪ್ರಶಾಂತ್ ಕಿಶೋರ್ ಗೆಲುವು ದಾಖಲಿಸಿದ್ದಾರೆ.
ಭಾರತೀಯ ಚುನಾವಣಾ ಆಯೋಗ (ECI) ಪ್ರಕಟಿಸಿರುವ ಅಂತಿಮ ಅಂಕಿಅಂಶಗಳ ಪ್ರಕಾರ, 32 ಸುತ್ತುಗಳ ಮತ ಎಣಿಕೆಯಲ್ಲಿ ಪ್ರಶಾಂತ್ ಕಿಶೋರ್ 63,946 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ನೀರಜ್ ಕುಮಾರ್ ಸಿನ್ಹಾ 44,700 ಮತಗಳನ್ನು ಪಡೆದಿದ್ದಾರೆ. ಈ ಗೆಲುವಿನೊಂದಿಗೆ ಬಂಕಿಪುರದಲ್ಲಿ ಮೂರು ದಶಕಗಳ ಬಿಜೆಪಿ ಪ್ರಾಬಲ್ಯಕ್ಕೆ ತೆರೆ ಬಿದ್ದಿದ್ದು, ಜನ್ ಸೂರಜ್ ಪಕ್ಷಕ್ಕೆ ಮಹತ್ವದ ರಾಜಕೀಯ ಯಶಸ್ಸು ಲಭಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.