ಮಂಗಳೂರು(www.vknews.jn): ಬದ್ರುಲ್ ಹುದಾ ಜುಮಾ ಮಸೀದಿ, ಕಾಂಜಿಲಕೋಡಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) ಇದರ ಜಂಟಿ ಆಶ್ರಯದಲ್ಲಿ ಎ.ಜೆ. ಆಸ್ಪತ್ರೆ ರಕ್ತನಿಧಿ, ಮಂಗಳೂರು ಸಹಭಾಗಿತ್ವದಲ್ಲಿ ಸಾರ್ವಜನಿಕ ರಕ್ತದಾನ ಶಿಬಿರವು ದಿನಾಂಕ 02-08-2026, ಭಾನುವಾರ ಯಶಸ್ವಿಯಾಗಿ ನಡೆಯಿತು. ಸ್ಥಳೀಯ ಖತೀಬರಾದ ಬಹು! ಅನ್ವರ್ ಫೈಝಿ ಉಸ್ತಾದರ ದುಆ ಮೂಲಕ ಶಿಬಿರಕ್ಕೆ ಚಾಲನೆ ನೀಡಲಾಯಿತು. ಶಿಬಿರದಲ್ಲಿ ಸಮಾಜದ ವಿವಿಧ ವರ್ಗದ ಜನರು ಉತ್ಸಾಹದಿಂದ ಭಾಗವಹಿಸಿ ಒಟ್ಟು 85 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ರಕ್ತದಾನ ಪ್ರಕ್ರಿಯೆಯಲ್ಲಿ ಎ.ಜೆ. ಆಸ್ಪತ್ರೆಯ ರಕ್ತನಿಧಿಯ ವೈದ್ಯರು ಹಾಗೂ ಸಿಬ್ಬಂದಿ ಅತ್ಯುತ್ತಮ ಸಹಕಾರ ನೀಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಕಾರಿಯಾ ಕೊಡಿಬೆಟ್ಟು ವಹಿಸಿದ್ದರು. ಗೌರವಾಧ್ಯಕ್ಷರಾದ ಮ್ ಎಚ್. ಮುಹಿದ್ದೀನ್ ಹಾಜಿ ಅವರುಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಕ್ತದಾನವು ಜೀವ ಉಳಿಸುವ ಶ್ರೇಷ್ಠ ಸೇವೆಯಾಗಿದ್ದು, ಸಮಾಜದಲ್ಲಿ ಇಂತಹ ಸೇವಾ ಕಾರ್ಯಗಳು ನಿರಂತರವಾಗಿ ನಡೆಯಬೇಕು ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಡಾ. ಗೋಪಾಲಕೃಷ್ಣ ಅವರು, ರಕ್ತದಾನದಿಂದ ಅನೇಕ ಅಮೂಲ್ಯ ಜೀವಗಳನ್ನು ಉಳಿಸಬಹುದಾಗಿದೆ. ಪ್ರತಿಯೊಬ್ಬ ಆರೋಗ್ಯವಂತ ನಾಗರಿಕರು ವರ್ಷಕ್ಕೆ ಕನಿಷ್ಠ ಒಂದು ಬಾರಿ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ತಮ್ಮ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು. ವೇದಿಕೆಯಲ್ಲಿ ಬದ್ರುಲ್ ಹುದಾ ಜುಮಾ ಮಸೀದಿಯ ಉಪಾಧ್ಯಕ್ಷ ರಾದ ಅಬ್ದುಲ್ ಲತೀಫ್ ಕಾರ್ಯದರ್ಶಿ ಮುಸ್ತಫಾ, ಮಾಜಿ ಅಧ್ಯಕ್ಷ ಅಹಮದ್ ಬಾವ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಸಂಸ್ಥೆಯ ಮಜೀದ್ ಅಮ್ಮುಂಜೆ, ಅಬ್ದುಲ್ ಸತ್ತಾರ್, ಫಾರೂಕ್ ಮನಾಲ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗ್ರಾಮದ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಯುವಕರು, ಸಾಮಾಜಿಕ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು. ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಕಾರ್ಯನಿರ್ವಾಹಕ ನಿಝಾಮ್ ತೋಕೂರು ರವರು ರಕ್ತದಾನ ಕ್ಷೇತ್ರದಲ್ಲಿ ನೀಡುತ್ತಿರುವ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಮುಹಮ್ಮದ್ ಅನಸ್. ಎ.ಕೆ ರಿಯಾಜ್ ಸ್ವಾಗತಿಸಿದರು… ಮುಹಮ್ಮದ್ ಅನೀಶ್ ಹಾಗು ನಿಜಾಮುದ್ದೀನ್ ಅವರು ನಿರೂಪಿಸಿದರು. ಮಾನವೀಯ ಸೇವೆಯ ಸಂಕೇತವಾಗಿರುವ ಈ ರಕ್ತದಾನ ಶಿಬಿರಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ಬದ್ರುಲ್ ಹುದಾ ಜುಮಾ ಮಸೀದಿ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ.) ಹಾಗೂ ಎ.ಜೆ. ಆಸ್ಪತ್ರೆ, ಮಂಗಳೂರು ಇವರ ಸೇವಾ ಮನೋಭಾವವನ್ನು ಎಲ್ಲರೂ ಶ್ಲಾಘಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.