ಕೋಝಿಕ್ಕೋಡ್ (www.vknews.in): ಪ್ರವಾಹದ ನೀರು ವೀಕ್ಷಿಸಲು ಸ್ನೇಹಿತರೊಂದಿಗೆ ತೆರಳಿದ್ದ ಯುವಕನೊಬ್ಬ ಆಕಸ್ಮಿಕವಾಗಿ ಜಲಾವೃತ ಹೊಲಕ್ಕೆ ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಕೋಝಿಕ್ಕೋಡ್ನಲ್ಲಿ ನಡೆದಿದೆ. ಮೃತರನ್ನು ಪೆರುವಾಯಲ್ ಕೊಣಾರಾಂಬು ನಿವಾಸಿ ಸುಹೈಲ್ ಎಂದು ಗುರುತಿಸಲಾಗಿದೆ.
ಸುಹೈಲ್ ಅವರು ಸ್ನೇಹಿತರೊಂದಿಗೆ ತಮ್ಮ ಮನೆಯ ಸಮೀಪದ ಜಲಾವೃತ ಪ್ರದೇಶಕ್ಕೆ ನೀರು ನೋಡಲು ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರು ತುಂಬಿದ್ದ ಹೊಲಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ಕೂಡಲೇ ಅವರನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಆದರೆ ಚಿಕಿತ್ಸೆ ಮುಂದುವರಿದರೂ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಮಂಗಳವಾರ ಬೆಳಗ್ಗೆ ಅವರು ಮೃತಪಟ್ಟಿದ್ದಾರೆ. ಪ್ರವಾಹದ ನೀರನ್ನು ವೀಕ್ಷಿಸಲು ತೆರಳಿದ್ದ ಸಂದರ್ಭದಲ್ಲಿ ಸಂಭವಿಸಿದ ಈ ದುರಂತದಿಂದ ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ಆಘಾತ ಮತ್ತು ದುಃಖದ ವಾತಾವರಣ ನಿರ್ಮಾಣವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.