ಉಪ್ಪಿನಂಗಡಿ (www.vknews.in): ವಿಮ್ (Women India Movement) ಉಪ್ಪಿನಂಗಡಿ ಕಡಬ ಬ್ಲಾಕ್ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ನೂತನ ಸಮಿತಿಯ ಅಧ್ಯಕ್ಷರಾಗಿ ಫಾಹಿನ ನಝೀರ್, ಉಪಾಧ್ಯಕ್ಷರಾಗಿ ಫಾತಿಮಾ ನಿರ್ಮಾ, ಕಾರ್ಯದರ್ಶಿಯಾಗಿ ನುಶ್ರತ್, ಜೊತೆ ಕಾರ್ಯದರ್ಶಿಯಾಗಿ ಆಶುರ ಆತೂರು ಹಾಗೂ ಕೋಶಾಧಿಕಾರಿಯಾಗಿ ಮೆಹರು ಅಬ್ದುಲ್ ಖಾದರ್ ಆಯ್ಕೆಯಾದರು. ಸಮಿತಿ ಸದಸ್ಯರಾಗಿ ನೆಬೀಸ ಮಠ ಹಾಗೂ ಫೌಝಿಯಾ ಕಲ್ಲಡ್ಕ ಆಯ್ಕೆಯಾಗಿದ್ದಾರೆ.
ಚುನಾವಣಾ ಪ್ರಕ್ರಿಯೆಯನ್ನು ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯರು ಹಾಗೂ ವಿಮ್ನ ಕೋಆರ್ಡಿನೇಟರ್ ಝೀನತ್ ಬಂಟ್ವಾಳ ಮತ್ತು ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಝೈನಾಬ್ ಬಂಟ್ವಾಳ ಅವರು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಫಾತಿಮಾ ನಿರ್ಮಾ ಅವರು ಸ್ವಾಗತ ಭಾಷಣ ಮಾಡಿದರು. ಫಾಹಿನ ನಝೀರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಳಿಕ ಝೀನತ್ ಬಂಟ್ವಾಳ ಅವರು ಪಕ್ಷದ ಕುರಿತಾಗಿ ತರಬೇತಿ ನೀಡಿದರು.
ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು. ಮಹಿಳೆಯರ ಸಾಮಾಜಿಕ, ಶೈಕ್ಷಣಿಕ ಹಾಗೂ ಸಬಲೀಕರಣದ ಕ್ಷೇತ್ರದಲ್ಲಿ ವಿಮ್ನ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ವಿಸ್ತರಿಸುವ ನಿಟ್ಟಿನಲ್ಲಿ ನೂತನ ಸಮಿತಿ ಕಾರ್ಯನಿರ್ವಹಿಸುವ ವಿಶ್ವಾಸವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.