ಕೋಲ್ಕತ್ತಾ (www.vknews.in): ಇಲ್ಲಿನ ನೀಲ್ರತನ್ ಸಿರ್ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 30 ವರ್ಷದ ನರ್ಸ್ವೊಬ್ಬರ ಮೃತದೇಹ ಶೌಚಾಲಯದಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತರನ್ನು ರೂಪಾಲಿ ಬರ್ಮನ್ (30) ಎಂದು ಗುರುತಿಸಲಾಗಿದೆ. ಆಸ್ಪತ್ರೆಯ ಶೌಚಾಲಯದ ಬಾಗಿಲು ದೀರ್ಘ ಸಮಯದವರೆಗೆ ಮುಚ್ಚಿದ್ದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ ಎನ್ನಲಾಗಿದೆ.
ಪದೇ ಪದೇ ಕರೆ ಮಾಡಿದರೂ ಪ್ರತಿಕ್ರಿಯೆ ದೊರೆಯದ ಹಿನ್ನೆಲೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಶೌಚಾಲಯದ ಬಾಗಿಲನ್ನು ಒಡೆದು ಒಳ ಪ್ರವೇಶಿಸಿದಾಗ ರೂಪಾಲಿ ಬರ್ಮನ್ ಅವರ ಮೃತದೇಹ ಪತ್ತೆಯಾಗಿದೆ. ಬಳಿಕ ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ನರ್ಸ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.