ಉಡುಪಿ (www.vknews.in): ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಕೌಡೂರಿ ನಿವಾಸಿ ಶೈನಿ ಅಸ್ಮಾ ಸಲ್ಡಾನ ಅವರು ಪೈಲಟ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಕಮರ್ಷಿಯಲ್ ಪೈಲಟ್ ಲೈಸೆನ್ಸ್ (CPL) ಪಡೆದುಕೊಳ್ಳುವ ಮೂಲಕ ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕೌಡೂರು ರಂಗನಪಲ್ಕೆಯ ಅಶೋಕ್ ಜಾಕೋಬ್ ಸಲ್ಡಾನ ಮತ್ತು ಮರಿಯಾ ಗ್ರೆಟ್ಟಾ ಸಲ್ಡಾನ ದಂಪತಿಯ ಪುತ್ರಿಯಾಗಿರುವ ಶೈನಿ ಅಸ್ಮಾ ಸಲ್ಡಾನ ಅವರು ಕಾರ್ಕಳದ ಕ್ರೈಸ್ಟ್ಕಿಂಗ್ ವಿದ್ಯಾಸಂಸ್ಥೆಯಲ್ಲಿ ಪಿಯುಸಿವರೆಗಿನ ಶಿಕ್ಷಣವನ್ನು ಪೂರ್ಣಗೊಳಿಸಿದ್ದಾರೆ. ಬಳಿಕ ಬೆಂಗಳೂರಿನಲ್ಲಿ ನಡೆದ ಇಂದಿರಾ ಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿ (IGRUA) ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಪೈಲಟ್ ತರಬೇತಿಗೆ ಆಯ್ಕೆಯಾಗಿದ್ದರು.
2023ರ ಆಗಸ್ಟ್ನಿಂದ ಉತ್ತರ ಪ್ರದೇಶದ ಫುರ್ಸತ್ಗಂಜ್ನಲ್ಲಿರುವ ಇಂದಿರಾ ಗಾಂಧಿ ರಾಷ್ಟ್ರೀಯ ಉಡಾನ್ ಅಕಾಡೆಮಿಯಲ್ಲಿ ಶೈನಿ ಅಸ್ಮಾ ಸಲ್ಡಾನ ಅವರು ಪೈಲಟ್ ತರಬೇತಿ ಪಡೆದರು. ಕಠಿಣ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಬಳಿಕ ಇದೀಗ ಕಮರ್ಷಿಯಲ್ ಪೈಲಟ್ ಲೈಸೆನ್ಸ್ ಪಡೆದುಕೊಂಡಿದ್ದಾರೆ. ಶೈನಿ ಅಸ್ಮಾ ಸಲ್ಡಾನ ಅವರ ಈ ಸಾಧನೆಗೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಸ್ಥಳೀಯರಿಂದ ಅಭಿನಂದನೆಗಳು ವ್ಯಕ್ತವಾಗಿದ್ದು, ಉಡುಪಿ ಜಿಲ್ಲೆಯ ಯುವತಿಯರಿಗೆ ಅವರು ಪ್ರೇರಣೆಯಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.