ಅಜ್ಜಿನಡ್ಕ | (www.vknews.in) ; ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅಜ್ಜಿನಡ್ಕದಲ್ಲಿ ತಾಜುಲ್ ಉಲಮಾ ಎಜುಕೇಶನ್ ಸೆಂಟರ್ ಹಾಗೂ KMJ SYS SSF ಅಜ್ಜಿನಡ್ಕ ಇವರ ವತಿಯಿಂದ ಸ್ಮರಣೀಯ ಧ್ವಜಾರೋಹಣ ಸಮಾರಂಭ ನಡೆಯಿತು.
ಸ್ವಾತಂತ್ರ್ಯದ ಸಂಭ್ರಮವನ್ನು ಹೆಮ್ಮೆಯಿಂದ ಆಚರಿಸಿದ ಕಾರ್ಯಕ್ರಮದಲ್ಲಿ ದೇಶಭಕ್ತಿಯ ಭಾವನೆಯೊಂದಿಗೆ ಹಲವರು ಭಾಗವಹಿಸಿದರು. ತ್ರಿವರ್ಣ ಧ್ವಜಾರೋಹಣದ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಲಾಯಿತು. “ಹೆಮ್ಮೆಯಲ್ಲಿ ಒಂದಾಗಿ, ಉತ್ಸಾಹದಲ್ಲಿ ಒಂದಾಗಿ, ಭಾರತೀಯರಾಗಿ ಒಂದಾಗಿ” ಎಂಬ ಸಂದೇಶದೊಂದಿಗೆ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಥಾಜುಲ್ ಉಲಮಾ ಎಜುಕೇಶನ್ ಸೆಂಟರ್ ಹಾಗೂ KMJ SYS SSF ಅಜ್ಜಿನಡ್ಕ ವತಿಯಿಂದ ಸಮಸ್ತ ಭಾರತೀಯರಿಗೆ 80ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳನ್ನು ಕೋರಲಾಯಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.