ಬಂಟ್ವಾಳ (www.vknews.in) : ತಾಲೂಕಿನ ಪಾಣೆಮಂಗಳೂರು ಅಕ್ಕರಂಗಡಿಯ ಹಿದಾಯತುಲ್ ಇಸ್ಲಾಂ ಮದ್ರಸ ಹಾಗೂ ಕೇಂದ್ರ ಜುಮಾ ಮಸೀದಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಕೇಂದ್ರ ಜುಮಾ ಮಸೀದಿಯ ಮುದರ್ರಿಸ್ ಝುಬೈರ್ ದಾರಿಮಿ, ಅಧ್ಯಕ್ಷ ಅಬ್ದುಲ್ ಗಫೂರ್ ಹಾಗೂ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯ ದಿನದ ಮಹತ್ವ ಹಾಗೂ ದೇಶದ ಜವಾಬ್ದಾರಿಗಳ ಕುರಿತು ಸಂದೇಶ ನೀಡಿದರು. ಸದರ್ ಮುಅಲ್ಲಿಂ ಮುಹಮ್ಮದ್ ಹನೀಫ್ ನಿಝಾಮಿ ಅವರು ವಿದ್ಯಾರ್ಥಿಗಳು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಿಗೆ ಸ್ವಾತಂತ್ರ್ಯ ದಿನದ ಪ್ರತಿಜ್ಞೆ ಬೋಧಿಸಿದರು.
ಈ ಸಂದರ್ಭದಲ್ಲಿ ಸಹ ಅಧ್ಯಾಪಕರಾದ ಅಬ್ದುಲ್ ಹಮೀದ್ ನಿಝಾಮಿ, ಅಬ್ದುಲ್ ರಹ್ಮಾನ್ ಅಸ್ಲಮಿ ಹಾಗೂ ಸಫ್ವಾನ್ ಹುದವಿ, ಕಮಿಟಿ ಸದಸ್ಯರು, ಊರಿನ ನಾಗರಿಕರು ಹಾಗೂ ಮದ್ರಸ ವಿದ್ಯಾರ್ಥಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮವು ದೇಶದ ಸ್ವಾತಂತ್ರ್ಯವನ್ನು ಗೌರವಿಸುವುದರ ಜೊತೆಗೆ, ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಜವಾಬ್ದಾರಿಯುತ ನಾಗರಿಕತೆಯ ಸಂದೇಶವನ್ನು ಸಾರಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.