ಕಾಸರಗೋಡು (www.vknews.in) : ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದ ಇಬ್ಬರು ಅಪ್ರಾಪ್ತ ಸಹೋದರಿಯರನ್ನು ಕಾರಿನಲ್ಲಿ ಕರೆದೊಯ್ದು ಲಾಡ್ಜ್ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಜೇಶ್ವರಂ ಮೂಲದ ರಿಜ್ವಾನ್ (23) ಮತ್ತು ಮೊಹಮ್ಮದ್ ಸಾದ್ (19) ಎಂದು ಗುರುತಿಸಲಾಗಿದೆ. ಇಬ್ಬರ ವಿರುದ್ಧವೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕಾಸರಗೋಡು ಪೊಲೀಸ್ ಠಾಣಾ ವ್ಯಾಪ್ತಿಯ 16 ಮತ್ತು 14 ವರ್ಷದ ಬಾಲಕಿಯರು ಆಗಸ್ಟ್ 15ರಂದು ಸ್ನೇಹಿತೆಯ ಮನೆಗೆ ತೆರಳುವುದಾಗಿ ಮನೆಯಿಂದ ಹೊರಟ ಬಳಿಕ ನಾಪತ್ತೆಯಾಗಿದ್ದರು. ಈ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಆರಂಭಿಸಿದ ಪೊಲೀಸರು ಸೈಬರ್ ಸೆಲ್ ನೆರವಿನಿಂದ ಮೊಬೈಲ್ ಸ್ಥಳದ ಮಾಹಿತಿ ಆಧರಿಸಿ ಬಾಲಕಿಯರನ್ನು ಪತ್ತೆಹಚ್ಚಿದರು. ಇಬ್ಬರೂ ಆರೋಪಿಗಳೊಂದಿಗೆ ತಲಪ್ಪಾಡಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಗಳು ಬಾಲಕಿಯರನ್ನು ಕಾರಿನಲ್ಲಿ ತಲಪ್ಪಾಡಿಗೆ ಕರೆದೊಯ್ದು ಅಲ್ಲಿನ ಲಾಡ್ಜ್ನಲ್ಲಿ ಕೊಠಡಿ ಪಡೆದುಕೊಂಡಿದ್ದರು. ಬಾಲಕಿಯರ ಹೇಳಿಕೆ ದಾಖಲಿಸಿದ ಬಳಿಕ ಲೈಂಗಿಕ ದೌರ್ಜನ್ಯದ ಆರೋಪ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ. ಸಂತ್ರಸ್ತ ಬಾಲಕಿಯರ ಗೌಪ್ಯತೆಯನ್ನು ಕಾಪಾಡುವ ಹಿನ್ನೆಲೆಯಲ್ಲಿ ಅವರ ಗುರುತು ಬಹಿರಂಗಪಡಿಸಲಾಗಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.