ಉಡುಪಿ / ಸಾಗರ (www.vknews.in): ಉಡುಪಿಯ ನಿಟ್ಟೂರು ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹೂಡೆ ಮೂಲದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರನ್ನು ಸಾಗರದ ಜನ್ನತ್ ನಗರ ನಿವಾಸಿ ಬೆಟ್ಟೆ ಗಫಾರ್ ಅವರ ಪುತ್ರ ಬೆಟ್ಟೇ ಅಫ್ರಾನ್ ಎಂದು ಗುರುತಿಸಲಾಗಿದೆ.
ನಿನ್ನೆ ಉಡುಪಿಯ ನಿಟ್ಟೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೆಟ್ಟೇ ಅಫ್ರಾನ್ ಅವರಿಗೆ ಗಂಭೀರ ಗಾಯಗಳಾಗಿದ್ದವು. ಅಪಘಾತದ ಬಳಿಕ ಅವರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.