ಬೆಂಗಳೂರು (www.vknews.in): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕೊಠಡಿಯಲ್ಲಿ ಮೊಬೈಲ್ ಫೋನ್, ಚಾರ್ಜರ್, ಡೈರಿ ಹಾಗೂ ಪೆನ್ಡ್ರೈವ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಜೈಲು ಅಧಿಕಾರಿಗಳನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.
ವಿಧಾನಸಭೆಯಲ್ಲಿ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಅವರು ನಿಯಮ 59(ಎ) ಅಡಿಯಲ್ಲಿ ಕೇಳಿದ ಶೂನ್ಯ ವೇಳೆಯ ಸೂಚನೆಗೆ ಸರ್ಕಾರ ನೀಡಿರುವ ಅಧಿಕೃತ ಲಿಖಿತ ಉತ್ತರದಲ್ಲಿ ಈ ಮಾಹಿತಿ ಬಹಿರಂಗವಾಗಿದೆ.
ಆಗಸ್ಟ್ 11, 2026ರಂದು ಬೆಂಗಳೂರು ಕೇಂದ್ರ ಕಾರಾಗೃಹದ ಮೇಲೆ ನಗರ ಅಪರಾಧ ವಿಭಾಗದ (CCB) ಪೊಲೀಸರು ಅನಿರೀಕ್ಷಿತ ದಾಳಿ ನಡೆಸಿ ತಪಾಸಣೆ ನಡೆಸಿದ್ದರು.
ಈ ವೇಳೆ ಗರಿಷ್ಠ ಭದ್ರತಾ ವಿಭಾಗ-3ರ ಹಿಂಭಾಗದ ಭಾಗ-1ರ ಕೊಠಡಿ ಸಂಖ್ಯೆ 4ರಲ್ಲಿ ದಾಖಲಾಗಿದ್ದ ಶಿಕ್ಷಾ ಬಂದಿ ಸಂಖ್ಯೆ 1528, ಅಂದರೆ ಪ್ರಜ್ವಲ್ ರೇವಣ್ಣ ಅವರ ಬಳಿ ಸಿಮ್ ಕಾರ್ಡ್ ಸಮೇತ ಒಂದು ರೆಡ್ಮಿ ಸ್ಮಾರ್ಟ್ಫೋನ್, ಮೊಬೈಲ್ ಚಾರ್ಜರ್, ಡೈರಿ ಹಾಗೂ ಸ್ಯಾನ್ಡಿಸ್ಕ್ ಪೆನ್ಡ್ರೈವ್ ಪತ್ತೆಯಾಗಿವೆ ಎಂದು ಸರ್ಕಾರ ತಿಳಿಸಿದೆ. ಈ ಸಂಬಂಧ ಪ್ರಜ್ವಲ್ ರೇವಣ್ಣ ವಿರುದ್ಧ ಆಗಸ್ಟ್ 11ರಂದೇ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ 319/2026ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕರ್ತವ್ಯಲೋಪದ ಆರೋಪದ ಮೇಲೆ ಮೂವರು ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಅಮಾನತುಗೊಂಡಿರುವ ಅಧಿಕಾರಿಗಳು:
ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಪೊಲೀಸ್ ಉಪಮಹಾನಿರೀಕ್ಷಕ ಜಿನೇಂದ್ರ ಖನಗಾವಿ (IPS) ಅವರಿಗೆ ಸೂಚಿಸಲಾಗಿದೆ. ತನಿಖಾ ವರದಿಯನ್ನು ಸರ್ಕಾರ ನಿರೀಕ್ಷಿಸುತ್ತಿದೆ.
ಪ್ರಜ್ವಲ್ ರೇವಣ್ಣ ಸೇರಿದಂತೆ ಯಾವುದೇ ಬಂದಿಗಳಿಗೆ ಕಾರಾಗೃಹದಲ್ಲಿ VVIP ಟ್ರೀಟ್ಮೆಂಟ್ ನೀಡಲಾಗುತ್ತಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ರಾಜ್ಯದ ಜೈಲುಗಳಲ್ಲಿ ಭದ್ರತೆ ಹಾಗೂ ಆಡಳಿತಾತ್ಮಕ ಕಾರಣಗಳಿಗಾಗಿ ಕೈದಿಗಳನ್ನು ಆಂಗ್ಲ ವರ್ಣಮಾಲೆಯ ಮಾದರಿಯಲ್ಲಿ ವಿಂಗಡಿಸಲಾಗುತ್ತದೆಯೇ ಹೊರತು, ವಿಐಪಿ ಮತ್ತು ಸಾಮಾನ್ಯ ಬಂದಿಗಳು ಎಂದು ಪ್ರತ್ಯೇಕ ವರ್ಗೀಕರಣ ಮಾಡಲಾಗಿಲ್ಲ ಎಂದು ಸರ್ಕಾರ ತಿಳಿಸಿದೆ. ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಸೇವಾ ಕೈಪಿಡಿ ಹಾಗೂ ಕಾರಾಗೃಹ ಕಾಯ್ದೆಯ ನಿಯಮಗಳ ಅನುಸಾರವೇ ಕೈದಿಗಳ ವಿಚಾರದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.