ಬೆಂಗಳೂರು (www.vknews.in): ರಾಜ್ಯದ ಎಲ್ಲಾ ಪಡಿತರ ಚೀಟಿದಾರರು ಮಹತ್ವದ ಸೂಚನೆಯನ್ನು ಗಮನಿಸಬೇಕು. ಸರ್ಕಾರದ ನಿರ್ದೇಶನದಂತೆ ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರೂ ಕಡ್ಡಾಯವಾಗಿ ಇ-ಕೆವೈಸಿ (e-KYC) ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಡಿತರ ಚೀಟಿಯಲ್ಲಿರುವ ಸದಸ್ಯರು ಇ-ಕೆವೈಸಿ ಮಾಡಿಸದೆ ಇದ್ದಲ್ಲಿ, ಮುಂದಿನ ದಿನಗಳಲ್ಲಿ ಅವರ ಮಾಹಿತಿಯನ್ನು ಸರ್ಕಾರಿ ದಾಖಲೆಗಳಲ್ಲಿ ಪರಿಗಣಿಸದಿರುವ ಸಾಧ್ಯತೆ ಇದೆ. ಹೀಗಾಗಿ ಯಾವುದೇ ತೊಂದರೆ ಎದುರಾಗದಂತೆ ಅರ್ಹ ಸದಸ್ಯರು ಶೀಘ್ರದಲ್ಲೇ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಇ-ಕೆವೈಸಿ ಮಾಡಿಸಿ 5 ವರ್ಷ ಪೂರ್ಣಗೊಂಡಿರುವ ಪಡಿತರ ಚೀಟಿ ಸದಸ್ಯರು ತಮ್ಮ ಸಮೀಪದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಬೇಕು. ಈ ವೇಳೆ ಆಧಾರ್ ಸಂಖ್ಯೆ, ಆಧಾರ್ಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆ ತಮ್ಮೊಂದಿಗೆ ತೆಗೆದುಕೊಂಡು ಹೋಗಬೇಕು. ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ (ಬೆರಳಚ್ಚು) ದೃಢೀಕರಣ ನೀಡುವ ಮೂಲಕ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು.
ಪಡಿತರ ಚೀಟಿದಾರರು ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿಯೇ ಇ-ಕೆವೈಸಿ ದೃಢೀಕರಣವನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮನವಿ ಮಾಡಿದ್ದಾರೆ. ಪಡಿತರ ಚೀಟಿಯಲ್ಲಿರುವ ಪ್ರತಿಯೊಬ್ಬ ಸದಸ್ಯರ ಇ-ಕೆವೈಸಿ ಪೂರ್ಣಗೊಂಡಿದೆಯೇ ಎಂಬುದನ್ನು ಕುಟುಂಬಸ್ಥರು ಪರಿಶೀಲಿಸಿಕೊಳ್ಳುವುದು ಅಗತ್ಯವಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.