ಬಂಟ್ವಾಳ (www.vknews.in) : ತಾಲೂಕಿನ ಪಾಣೆಮಂಗಳೂರು ಅಕ್ಕರಂಗಡಿಯ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ಸಭಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಹಾಗೂ ದೇಶಭಕ್ತಿ ಕಾರ್ಯಕ್ರಮಗಳು ನಡೆಯಿತು.
ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಶಿಕ್ಷಕರು ಹಾಗೂ ಅತಿಥಿಗಳು, ಸ್ವಾತಂತ್ರ್ಯವು ಕೇವಲ ಆಚರಣೆಗೆ ಸೀಮಿತವಾಗದೆ ಅದರ ಮೌಲ್ಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ದೇಶದ ಸಂವಿಧಾನ, ಏಕತೆ, ಸೌಹಾರ್ದತೆ ಹಾಗೂ ಸಾಮಾಜಿಕ ಜವಾಬ್ದಾರಿಗಳನ್ನು ಅರಿತು ಉತ್ತಮ ನಾಗರಿಕರಾಗಿ ಬೆಳೆಯಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿಗಳಿಂದ ನಡೆದ ವಿವಿಧ ಕಾರ್ಯಕ್ರಮಗಳು ಸ್ವಾತಂತ್ರ್ಯ ದಿನಾಚರಣೆಗೆ ಮತ್ತಷ್ಟು ಮೆರುಗು ನೀಡಿದವು. ದೇಶಭಕ್ತಿ, ಶಿಸ್ತು ಮತ್ತು ರಾಷ್ಟ್ರಪ್ರೇಮವನ್ನು ಬಿಂಬಿಸುವ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ನೂರುದ್ದೀನ್ ಜಿ., ಮಾಜಿ ಮುಖ್ಯೋಪಾಧ್ಯಾಯ ಅಬ್ದುಲ್ ಹಮೀದ್, ಸಹ ಅಧ್ಯಾಪಕ ರಾಧಾಕೃಷ್ಣನ್, ಶಾಲಾಡಳಿತ ಸಮಿತಿಯ ತಸ್ಲೀಂ ಆರೀಫ್, ಅಡ್ವಕೇಟ್ ಅಹ್ಮದ್ ಇಜಾಝ್, ಕೇಂದ್ರ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ಗಫೂರ್ ಜೆಟಿಟಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಹಾಗೂ ಅಬ್ಬೊನು ಹಾಜಿ ಅಕ್ಕರಂಗಡಿ ಉಪಸ್ಥಿತರಿದ್ದರು.
ಶಾಲಾ ಕಮಿಟಿ ಸದಸ್ಯರು, ಊರಿನ ನಾಗರಿಕರು, ಹಳೆ ವಿದ್ಯಾರ್ಥಿಗಳು, ಗೌರವ ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಸಾಕ್ಷಿಯಾದರು. ಗೌರವ ಶಿಕ್ಷಕಿ ನೌರಿನಾ ಸ್ವಾಗತಿಸಿ, ರೇಷ್ಮಾ ವಂದಿಸಿದರು. ಅಸ್ಮತ್ ಕಾರ್ಯಕ್ರಮ ನಿರೂಪಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.