ಕುಳಾಯಿ (www.vknews.in): ಸ್ಮೈಲ್ ಫೌಂಡೇಶನ್ ಕುಳಾಯಿ ಇದರ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ, ಡ್ರಗ್ಸ್ ಜಾಗೃತಿ ಕಾರ್ಯಕ್ರಮ ಹಾಗೂ ಕ್ರೀಡಾಕೂಟವನ್ನು ಆಗಸ್ಟ್ 15ರಂದು ವಿದ್ಯಾನಗರ ಕುಳಾಯಿಯಲ್ಲಿ ಹಮ್ಮಿಕೊಳ್ಳಲಾಯಿತು.
ಅಫ್ತಾಬ್ ಕುಳಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಪೊರೇಟರ್ ಶ್ರೀಮತಿ ವೇದಾವತಿ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಸ್ಮೈಲ್ ಫೌಂಡೇಶನ್ನ ಸಾಮಾಜಿಕ ಸೇವಾ ಕಾರ್ಯವೈಖರಿಯನ್ನು ಶ್ಲಾಘಿಸಿ, ಸಂಸ್ಥೆಯ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಕುಳಾಯಿ ಬದ್ರಿಯಾ ಜುಮ್ಮಾ ಮಸೀದಿಯ ಖತೀಬರಾದ ನುಹ್ಮಾನ್ ಸಖಾಫಿ ಅವರು, ಯುವಜನತೆ ಡ್ರಗ್ಸ್ನಂತಹ ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಹಾಗೂ ಜವಾಬ್ದಾರಿಯುತ ಜೀವನ ನಡೆಸುವಂತೆ ಕರೆ ನೀಡಿದರು. ಡ್ರಗ್ಸ್ನ ದುಷ್ಪರಿಣಾಮಗಳ ಕುರಿತು ಯುವಕರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ರಕ್ತದ ಅವಶ್ಯಕತೆ ಎದುರಾದಾಗ ತಕ್ಷಣ ಸ್ಪಂದಿಸಿ ರಕ್ತದಾನ ವ್ಯವಸ್ಥೆಗೆ ನೆರವಾಗುತ್ತಿರುವ ಸ್ಮೈಲ್ ಫೌಂಡೇಶನ್ನ ಪ್ರಧಾನ ಕಾರ್ಯದರ್ಶಿ ತೌಫೀಕ್ ಕುಳಾಯಿ ಅವರನ್ನು ಗಣ್ಯರ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸ್ಥಳೀಯರಾದ ದಕ್ಷಣ್ಣ, ಸಯ್ಯದ್, ಹಮೀದ್, ಶರೀಫ್ ಸೇರಿದಂತೆ ಹಲವಾರು ಅತಿಥಿಗಳು ಭಾಗವಹಿಸಿ ಸಂಸ್ಥೆಯ ಕಾರ್ಯಗಳಿಗೆ ಶುಭಹಾರೈಸಿದರು.
ಸಂಸ್ಥೆಯ ಕಾರ್ಯನಿರ್ವಾಹಕರಾದ ಅಕ್ಬರ್, ಮುಝ್ನಿ, ಸದ್ದು, ಫಯಾಜ್, ಶಾಹಿದ್, ಅದ್ದು, ಶುಕೂರ್ ಸೇರಿದಂತೆ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಬದ್ರುದ್ದೀನ್ ಕಾರ್ಯಕ್ರಮ ನಿರೂಪಿಸಿದರು. ಮಸೂದ್ ವಂದಿಸಿದರು.
ಸಾಮಾಜಿಕ ಸೇವೆ, ಯುವಜನರಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಹಾಗೂ ಕ್ರೀಡಾ ಚಟುವಟಿಕೆಗಳ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸ್ಮೈಲ್ ಫೌಂಡೇಶನ್ನ ಈ ಕಾರ್ಯಕ್ರಮ ಸಾರ್ವಜನಿಕರ ಗಮನ ಸೆಳೆಯಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.