ಸಿಇಒ ಡಾ. ಪ್ರವೀಣ್ ಪಿ. ಬಾಗೇವಾಡಿ
ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಆರೋಗ್ಯ, ನಾಯಕತ್ವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯಾದ್ಯಂತ 10 ಸಾವಿರ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕೋಲಾರ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಜನಸಂಖ್ಯೆಗೆ ಅನುಗುಣವಾಗಿ ಯುವ ಸಂಘಗಳನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಸಂಘದಲ್ಲಿ ಕನಿಷ್ಠ 100 ಯುವ ಸದಸ್ಯರಿರಬೇಕು. ಗರಿಷ್ಠ ಸದಸ್ಯತ್ವಕ್ಕೆ ಯಾವುದೇ ಮಿತಿ ಇರುವುದಿಲ್ಲ.
16ರಿಂದ 35 ವರ್ಷದೊಳಗಿನ ಯುವಕ ಯುವತಿಯರು ಸದಸ್ಯರಾಗಬಹುದಾಗಿದೆ. ನೋಂದಣಿಗೆ ಆಧಾರ್ ಕಾರ್ಡ್ ಅಗತ್ಯವಿದ್ದು, ₹10 ನೋಂದಣಿ ಶುಲ್ಕ ನಿಗದಿಪಡಿಸಲಾಗಿದೆ. ನೋಂದಾಯಿತ ಸಂಘಗಳನ್ನು ಸೊಸೈಟೀಸ್ ರಿಜಿಸ್ಟ್ರೇಷನ್ ಕಾಯ್ದೆಯಡಿ ನೋಂದಾಯಿಸಿ, ಪ್ರತ್ಯೇಕ ಬ್ಯಾಂಕ್ ಖಾತೆ ತೆರೆಯುವ ವ್ಯವಸ್ಥೆ ಮಾಡಲಾಗುತ್ತದೆ. ಅರ್ಜಿದಾರರು ಸಂಬಂಧಿಸಿದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಯಾಗಿರಬೇಕು. ಒಬ್ಬ ವ್ಯಕ್ತಿ ಒಂದು ಸಂಘದಲ್ಲಿ ಮಾತ್ರ ಸದಸ್ಯರಾಗಲು ಅವಕಾಶವಿದೆ.
ಯುವ ಸಬಲೀಕರಣಕ್ಕೆ ಆದ್ಯತೆ ಯುವಕರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವುದು, ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವುದು, ಕ್ರೀಡೆ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸುವುದು, ಸಂವಿಧಾನದ ಮೌಲ್ಯಗಳ ಕುರಿತು ಅರಿವು ಮೂಡಿಸುವುದು, ಪರಿಸರ ಸಂರಕ್ಷಣೆ, ಸಾಮಾಜಿಕ ಸೌಹಾರ್ದತೆ ಹಾಗೂ ಸ್ಥಳೀಯ ಅಭಿವೃದ್ಧಿ ಚಟುವಟಿಕೆಗಳಲ್ಲಿ ಯುವಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವುದು ಯೋಜನೆಯ ಪ್ರಮುಖ ಉದ್ದೇಶಗಳಾಗಿವೆ.
ಆನ್ಲೈನ್ ನೋಂದಣಿ ಅರ್ಹ ಯುವಕ ಯುವತಿಯರು bjys.karnataka.gov.in ವೆಬ್ಸೈಟ್ ಮೂಲಕ ಮೊಬೈಲ್ನಲ್ಲಿಯೇ ನೇರವಾಗಿ ನೋಂದಾಯಿಸಿಕೊಳ್ಳಬಹುದು. ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ನಾಗರಿಕ ಸೇವಾ ಕೇಂದ್ರಗಳ ಮೂಲಕವೂ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಕೋಲಾರ ಜಿಲ್ಲೆಯ ಹೆಚ್ಚಿನ ಸಂಖ್ಯೆಯ ಅರ್ಹ ಯುವಜನರು ಕೂಡಲೇ ನೋಂದಾಯಿಸಿಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಯುವಶಕ್ತಿಯನ್ನು ಸೃಜನಶೀಲ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸುವ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ‘ಭಾರತ್ ಜೋಡೋ ಯುವ ಸಂಘ’ಗಳು ಉತ್ತಮ ವೇದಿಕೆಯಾಗಲಿವೆ ಎಂದು ಡಾ. ಪ್ರವೀಣ್ ಪಿ. ಬಾಗೇವಾಡಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.