ಅಮರಾವತಿ (www.vknews.in): ಮನೆಕೆಲಸ ಪೂರ್ಣಗೊಳಿಸದ ಕಾರಣ ಶಿಕ್ಷಕರೊಬ್ಬರು ಕೋಲಿನಿಂದ ಹೊಡೆದ ಬಳಿಕ ಆರು ವರ್ಷದ ಬಾಲಕ ತರಗತಿಯಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ವಿಶಾಖಪಟ್ಟಣಂನ ಒನ್ ಟೌನ್ ಪ್ರದೇಶದ ಲಿಟಲ್ ಗಾರ್ಡನ್ ಶಾಲೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಪ್ರಣಯ್ ತೇಜ ಎಂದು ಗುರುತಿಸಲಾಗಿದ್ದು, ಆತ ಶಾಲೆಯ ಪ್ರಥಮ ತರಗತಿಯ ವಿದ್ಯಾರ್ಥಿಯಾಗಿದ್ದನು. ಮನೆಕೆಲಸ ಬರೆಯದ ಕಾರಣ ಶಿಕ್ಷಕರು ಬಾಲಕನಿಗೆ ಕೋಲಿನಿಂದ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ಹೊಡೆತದ ಬಳಿಕ ಬಾಲಕ ತರಗತಿಯಲ್ಲೇ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾನೆ ಎನ್ನಲಾಗಿದೆ. ತಕ್ಷಣ ಆತನನ್ನು ವಿಶಾಖಪಟ್ಟಣಂನ ಕಿಂಗ್ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬಾಲಕನ ಸಾವಿಗೆ ನಿಖರ ಕಾರಣವೇನು ಎಂಬುದು ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಸ್ಪಷ್ಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿಕ್ಷಕರ ಹೊಡೆತವೇ ಬಾಲಕನ ಸಾವಿಗೆ ಕಾರಣವೇ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.