ಕಾಸರಗೋಡು (www.vknews.in): ಶಾಲಾ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ಬೋವಿಕ್ಕಾನ ಸಮೀಪದ ಪೊವ್ವಲ್ ಮಾಸ್ತಿಕುಂಡು ಎಂಬಲ್ಲಿ ನಡೆದಿದೆ. ಮೃತರನ್ನು ಗಾಳಿಮುಖ ನೆಟ್ಟಣಿಗೆಯ ಹೊಸಹಿತ್ತಿಲು ನಿವಾಸಿ ಎಸ್. ಶಮ್ಮಾಸ್ ಅಬ್ದುಲ್ಲಾ (25) ಎಂದು ಗುರುತಿಸಲಾಗಿದೆ.
ಶಮ್ಮಾಸ್ ಅವರು ಚೆರ್ಕಳ ಕಡೆಯಿಂದ ಗಾಳಿಮುಖದತ್ತ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಮಾಸ್ತಿಕುಂಡು ಬಳಿ ಎದುರಿನಿಂದ ಬರುತ್ತಿದ್ದ ಖಾಸಗಿ ಶಾಲಾ ಬಸ್ ಬೈಕ್ಗೆ ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಶಮ್ಮಾಸ್ ಅವರನ್ನು ತಕ್ಷಣ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಕುರಿತು ಆದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.