ಕಾಕಿನಾಡ (www.vknews.in): ಆಂಧ್ರಪ್ರದೇಶದ ಕಾಕಿನಾಡದಲ್ಲಿರುವ ಎಸ್.ಕೆ. ನರ್ಸಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ಮೊಬೈಲ್ ಫೋನ್ ಕಾಣೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರ ಎರಡು ಗುಂಪುಗಳ ನಡುವೆ ತೀವ್ರ ಘರ್ಷಣೆ ನಡೆದಿರುವ ಘಟನೆ ವರದಿಯಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಣಿಪುರ ಸೇರಿದಂತೆ ಈಶಾನ್ಯ ಭಾರತದ ವಿದ್ಯಾರ್ಥಿನಿಯರು ಹಾಗೂ ಸ್ಥಳೀಯ ತೆಲುಗು ಭಾಷಿಕ ವಿದ್ಯಾರ್ಥಿನಿಯರ ನಡುವೆ ಮೊಬೈಲ್ ಫೋನ್ ವಿಚಾರವಾಗಿ ಮಾತಿನ ಚಕಮಕಿ ಆರಂಭವಾಗಿ, ಬಳಿಕ ಅದು ಹೊಡೆದಾಟಕ್ಕೆ ತಿರುಗಿದೆ ಎನ್ನಲಾಗಿದೆ.
ವಾದ-ವಿವಾದ ತಾರಕಕ್ಕೇರಿದ ಬಳಿಕ ವಿದ್ಯಾರ್ಥಿನಿಯರು ಕೋಲುಗಳು, ಬಕೆಟ್ಗಳು ಹಾಗೂ ಚಪ್ಪಲಿಗಳನ್ನು ಬಳಸಿಕೊಂಡು ಪರಸ್ಪರ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಕೆಲ ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಘರ್ಷಣೆ ಹಾಸ್ಟೆಲ್ನಿಂದ ಹೊರಭಾಗದ ರಸ್ತೆಯವರೆಗೂ ಮುಂದುವರಿದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಈಶಾನ್ಯ ಭಾರತದ ಕೆಲವು ವಿದ್ಯಾರ್ಥಿನಿಯರು ರಕ್ಷಣೆಗಾಗಿ ಹಾಸ್ಟೆಲ್ ಕೊಠಡಿಗಳ ಒಳಗೆ ಬೀಗ ಹಾಕಿಕೊಂಡಿದ್ದರು ಎಂದು ತಿಳಿದುಬಂದಿದೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಮಣಿಪುರ, ಅಸ್ಸಾಂ ಹಾಗೂ ನಾಗಾಲ್ಯಾಂಡ್ ಸೇರಿದಂತೆ ಈಶಾನ್ಯ ರಾಜ್ಯಗಳ 31 ವಿದ್ಯಾರ್ಥಿನಿಯರನ್ನು ಅವರ ಒಪ್ಪಿಗೆಯ ಮೇರೆಗೆ ಪ್ರತ್ಯೇಕ ಸುರಕ್ಷಿತ ಹಾಸ್ಟೆಲ್ಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಪರಿಸ್ಥಿತಿಯನ್ನು ಪರಿಶೀಲಿಸಿ, ವಿದ್ಯಾರ್ಥಿನಿಯರ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸ್ಥಳಾಂತರದ ಬಳಿಕ ಮಣಿಪುರದ ವಿದ್ಯಾರ್ಥಿನಿಯರು ತಾವು ಸುರಕ್ಷಿತವಾಗಿರುವುದಾಗಿ ತಿಳಿಸಿದ್ದು, ಜಿಲ್ಲಾಡಳಿತ ಕೈಗೊಂಡ ತ್ವರಿತ ಕ್ರಮಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಸದ್ಯ ಕಾಲೇಜು ಹಾಗೂ ಹಾಸ್ಟೆಲ್ ಆವರಣದಲ್ಲಿ ಪರಿಸ್ಥಿತಿ ಶಾಂತಿಯುತವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
Deeply concerned by reports of a clash at S.K. School of Nursing in Andhra Pradesh involving students from the Northeast, including Manipur. I request Hon’ble CM Shri @ncbn ji to kindly look into the matter and ensure the safety and fair treatment of the students. Our children… https://t.co/Owk2rWOBcU — N. Biren Singh (@NBirenSingh) August 22, 2026
Deeply concerned by reports of a clash at S.K. School of Nursing in Andhra Pradesh involving students from the Northeast, including Manipur.
I request Hon’ble CM Shri @ncbn ji to kindly look into the matter and ensure the safety and fair treatment of the students. Our children… https://t.co/Owk2rWOBcU
— N. Biren Singh (@NBirenSingh) August 22, 2026
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.